ತೆಲಂಗಾಣ:ಹೊಸ ಸಚಿವಾಲಯದ ಆವರಣದಲ್ಲಿ ನಿರ್ಮಿಸಲಾದ ದೇವಾಲಯ, ಮಸೀದಿ ಮತ್ತು ಚರ್ಚ್ ಅನ್ನು ಶುಕ್ರವಾರ (ಆಗಸ್ಟ್​ 25) ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರೊಂದಿಗೆ ಆಗಮಿಸಿ, ಉದ್ಘಾಟಿಸಿದರು.
ಇದನ್ನೂ ಓದಿ:ಧಾರ್ಮಿಕ ಕಾರ್ಯ ಎಲ್ಲರನ್ನೂ ಒಗ್ಗೂಡಿಸುವ ಮಹಾನ್ ಅಸ್ತ್ರ
ನೂತನ ಸಚಿವಾಲಯದ ಸುತ್ತಮುತ್ತ ನಿರ್ಮಾಣ ಮಾಡಲಾಗಿರುವ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಅನ್ನು ಸಿಎಂ ಕೆಸಿಆರ್​, ಪ್ರಾರ್ಥನೆ ಸಲ್ಲಿಸುವ ಮೂರು ಸ್ಥಳಗಳಿಗೆ ಪ್ರತ್ಯೇಕವಾಗಿ ಭೇಟಿ ನೀಡಿ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವ ಮುಖೇನ ಉದ್ಘಾಟನೆ ಮಾಡಿದರು. ಈ ವೇಳೆ ಹಲವು ಸಚಿವರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎಐಎಂಐಎಂ ಅಧ್ಯಕ್ಷ, ಹೈದರಾಬಾದ್ ಲೋಕಸಭಾ ಸದಸ್ಯ ಅಸಾದುದ್ದೀನ್ ಓವೈಸಿ ಮತ್ತು ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಓವೈಸಿ ಮಸೀದಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಚಂದ್ರಗುತ್ತಿ ಶ್ರೀ ರೇಣುಕಾಂಬ ದೇಗುಲದಲ್ಲಿ ಮುತ್ತೈದೆಯರಿಗೆ ಉಡಿ ತುಂಬಿ ವರ ಮಹಾಲಕ್ಷ್ಮೀ ಹಬ್ಬ ಆಚರಣೆ
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ಸಹೋದರತ್ವವನ್ನು ಕಾಪಾಡುವ ಸರ್ಕಾರದ ಪ್ರಯತ್ನಗಳು ಮುಂದುವರಿಯಲಿವೆ. ತೆಲಂಗಾಣ ಸೆಕ್ರೆಟರಿಯೇಟ್  ಆವರಣದಲ್ಲಿ ದೇವಾಲಯ, ಚರ್ಚ್ ಮತ್ತು ಮಸೀದಿಯನ್ನು ನಿರ್ಮಿಸಲಾಗಿದೆ. ಇದು ಇಡೀ ದೇಶಕ್ಕೆ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆಯಾಗಿದೆ” ಎಂದು ಹೇಳಿದರು,(ಏಜೆನ್ಸೀಸ್).
ಎರಡು ವಾರಗಳಲ್ಲಿ ‘ಜೈಲರ್​’ ಬಾಕ್ಸ್​ ಆಫೀಸ್​​ ಗಳಿಕೆಯೆಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
