ಹೈದರಾಬಾದ್​:ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕಲ್ವಕುಂಟ್ಲ ಕವಿತಾ ಗುರುವಾರ ವಿಧಾನಪರಿಷತ್ ಸದಸ್ಯೆ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರ ರಾಜಕೀಯ ಜೀವನದ ಸೆಕೆಂಡ್ ಇನ್ನಿಂಗ್ಸ್ ಆರಂಭವಾಗಿದೆ ಎನ್ನಲಾಗುತ್ತಿದೆ.
ಕಾಮರೆಡ್ಡಿ ಹಾಗೂ ನಿಜಾಮಾಬಾದ್ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯೆ ಆಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಇದಕ್ಕಾಗಿ ನಾನು ನನ್ನ ಪಕ್ಷಕ್ಕೆ ಹಾಗೂ ನನ್ನನ್ನು ಆಯ್ಕೆ ಮಾಡಿದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಿಗೇ ಟ್ಟೀಟ್​ ಮಾಡಿ ಹೇಳಿಕೊಂಡಿದ್ದಾರೆ.
ಈ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಏಕೈಕ ಪುತ್ರಿ ಹಾಗೂ ಅವರ ಕುಟುಂಬದ ಏಕೈಕ ಮಹಿಳೆ ರಾಜಕೀಯವಾಗಿ ಅಧಿಕಾರ ಸ್ವೀಕರಿಸಿದಂತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ಕವಿತಾ, ಈ ಮೂಲಕ ರಾಜಕೀಯವಾಗಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಿದಂತಾಗಿದೆ ಎನ್ನಲಾಗುತ್ತಿದೆ. (ಏಜೆನ್ಸೀಸ್)
Took oath as Kamareddy and Nizamabad districts local bodies MLC. I humbly thank my party for the opportunity and the local body representatives who have elected me to this position.#SoliderOfKCR#TRSpic.twitter.com/dzsZy3Hf6r
— Kavitha Kalvakuntla (@RaoKavitha)October 29, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + three =
Remember me
