ನವದೆಹಲಿ:ಕರೊನಾ ವಾರಿಯರ್​ ಆಗಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ವರ್ಗದವರು ಬಹಳಷ್ಟಿದ್ದಾರೆ. ಆ ಪೈಕಿ ಪ್ರಮುಖವಾಗಿ ಇರುವಂಥವರು ಎಂದರೆ ವೈದ್ಯರು. ವೈದ್ಯರು ಮಾತ್ರವಲ್ಲದೆ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಮುಂತಾದವರನ್ನೆಲ್ಲ ಕರೊನಾ ವಾರಿಯರ್ ಎಂದು ಪರಿಗಣಿಸಲಾಗಿದ್ದು, ಅವರು ಕೋವಿಡ್​ನಿಂದಾಗಿ ಮೃತಪಟ್ಟರೆ ಸರ್ಕಾರದಿಂದ ಲಕ್ಷಾಂತರ ರೂಪಾಯಿ ಪರಿಹಾರವಾಗಿ ಲಭಿಸಲಿದೆ.
ರಾಷ್ಟ್ರ ರಾಜಧಾನಿಯಲ್ಲಿ ಹೀಗೆ ವೈದ್ಯರೊಬ್ಬರು ಕರೊನಾಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಕೊಟ್ಟಿರುವ ಪರಿಹಾರ ಮೊತ್ತ ಬರೋಬ್ಬರಿ 1 ಕೋಟಿ ರೂಪಾಯಿ. ದೆಹಲಿಯ ಡಾ.ಅನಾಸ್ ಎಂಬ 26 ವರ್ಷದ ವ್ಯಕ್ತಿ ಕರೊನಾ ಸೋಂಕಿತರಾಗಿ ಇತ್ತೀಚೆಗಷ್ಟೇ ಮೃತಪಟ್ಟಿದ್ದರು.
ಇದನ್ನೂ ಓದಿ:ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!
ಡಾ. ಅನಾಸ್ ಅವರ ಮನೆಗೆ ಭೇಟಿ ನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒಂದು ಕೋಟಿ ರೂಪಾಯಿ ಮೌಲ್ಯದ ಚೆಕ್​ ಹಸ್ತಾಂತರಿಸಿದ್ದಾರೆ. ‘ನನ್ನ ಪುತ್ರ ಕರ್ತವ್ಯದ ಮೇಲಿದ್ದ, ಜನರ ಸೇವೆ ಮಾಡಿ ಜೀವ ಕಳೆದುಕೊಂಡಿದ್ದಾನೆ. ನನ್ನ ಇತರ ಮಕ್ಕಳೂ ಅವನಂತೆಯೇ ದೇಶಕ್ಕಾಗಿ ಸೇವೆ ಮಾಡಲಿ ಎಂದು ಬಯಸುತ್ತೇನೆ’ ಎಂಬುದಾಗಿ ಅನಾಸ್ ಅವರ ತಂದೆ ಈ ವೇಳೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ

ಕೋವಿಡ್​ನಿಂದ ಗುಣವಾದ ಮೇಲೆ ಕಾಡುತ್ತದೆಯಂತೆ ನಿತ್ರಾಣ!; ಆರು ತಿಂಗಳಾದರೂ ಸುಸ್ತೋ ಸುಸ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seven =
Remember me
