ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು, ಸಿಸಿಟಿವಿ ಕ್ಯಾಮೆರಾಗಳು ಮತ್ತು ತಡೆಗೋಡೆಗಳನ್ನು ಮುರಿದಿದ್ದಾರೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪ ಮಾಡಿದ್ದಾರೆ.
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಯಕರ್ತರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಗೇಟ್‌ಗೆ ಕೇಸರಿ ಬಣ್ಣ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಕಾಶ್ಮೀರಿ ಪಂಡಿತರ ಮೇಲಿನ ಹೇಳಿಕೆ ವಿರುದ್ಧ ಪ್ರತಿಭಟನೆ:
ಕಾಶ್ಮೀರಿ ಹಿಂದೂಗಳ ಬಗ್ಗೆ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಯುವ ಮುಖಂಡರು ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಈ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ, ವೈಭವ್ ಸಿಂಗ್ ಸೇರಿದಂತೆ ದೆಹಲಿ ಪ್ರದೇಶ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಅಪಘಾತದಲ್ಲಿ ತಂದೆ ಸಾವು, ಹೃದಯಾಘಾತದಿಂದ ತಾಯಿ ಸಾವು… ನೋವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
