ನವದೆಹಲಿ:ಅನ್ನಭಾಗ್ಯದ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಸಂಘರ್ಷ ನಡೆಯುತ್ತಿರುವ ನಡುವೆಯೇ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಭೇಟಿ ನಡೆದಿದೆ. ಈ ಮೂಲಕ ಇಬ್ಬರ ಭೇಟಿ ಕುತೂಹಲ ಕೆರಳಿಸಿದೆ.
ಇಂದು ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಈ ಮೊದಲೇ ಹೇಳಿದಂತೆ ಜುಲೈ 1ರಂದೇ ಅನ್ನಭಾಗ್ಯ ಯೋಜನೆ ಜಾರಿಗೆ ಬರುವುದು ಅನುಮಾನ ಎಂದಿದ್ದರು. ಅಕ್ಕಿಯ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿರುವುದರಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ ಎಂದಿದ್ದರು.
ಇದನ್ನೂ ಓದಿ:ಜುಲೈ 1ರಂದು ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ ಸಿದ್ದರಾಮಯ್ಯ

ಅಲ್ಲದೆ, ಈ ವಿಚಾರವಾಗಿ ಅಮಿತ್ ಷಾ ಬಳಿ ಮಾತನಾಡುವುದಾಗಿಯೂ ಅವರು ಹೇಳಿದ್ದರು. ಅದರಂತೆಯೇ ಈಗ ಸಿದ್ದರಾಮಯ್ಯ ಮತ್ತು ಅಮಿತ್ ಷಾ ಭೇಟಿ ಮಾಡಿದ್ದು, ಮಹತ್ವದ ಮಾತುಕತೆ ನಡೆದಿದೆ. ಕೇಂದ್ರ ಸರ್ಕಾರದ ನೀತಿಯಿಂದ ಬಡವರ ಊಟಕ್ಕೆ ತೊಂದರೆಯಾಗಿದೆ ಎಂದು ಕೇಂದ್ರ ಸಚಿವರಿಗೆ ಈ ವೇಳೆ ಸಿಎಂ ಮನವರಿಕೆ ಮಾಡಿದ್ದಾರೆ. ಅಲ್ಲದೆ ಅಕ್ಕಿ ವಿಚಾರವಾಗಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಜತೆ ಚರ್ಚಿಸುವುದಾಗಿ ಷಾ ಭರವಸೆ ನೀಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.
ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಷಾ ಮುಂದೆ ಸಿಎಂ ವ್ಯಕ್ತಪಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರೂ ಆದ್ರೆ ನೀವೇ ಜವಾಬ್ದಾರಿ: ಎಸ್​ಪಿಗೆ ಡಿವೈಎಸ್​ಪಿ ಪತ್ರ

ಆಸ್ಪತ್ರೆಯಲ್ಲಿದ್ದ ಸಂಬಂಧಿಯನ್ನು ನೋಡಲು ಬಂದವರೇ ಇನ್ನಿಲ್ಲ!; ತಾಯಿ ಸಾವು, ಮಗ-ಮೊಮ್ಮಗಳಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + ten =
Remember me
