ಬೆಂಗಳೂರು:ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್​ ಭವನದಲ್ಲಿ ಭಾರಿ ಭದ್ರತಾ ಲೋಪ ಕಂಡುಬಂದಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರತಾಪ್​ ಸಿಂಹ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ನರೆದುಕೊಂಡಿರುವ ಅವರು, 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಶಂಕಿಸಿದ್ದಾರೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ…
ಇದನ್ನೂ ಓದಿ:ಅಭಿಮಾನಿಯ ಬರ್ತ್​ಡೇ ಪಾರ್ಟಿಯಲ್ಲಿ ಎಂಎಸ್​ಡಿ; ಈ ಒಂದು ಕಾರಣಕ್ಕಾಗಿ ನೀವು ಸ್ಪೆಷಲ್​ ಎಂದ ನೆಟ್ಟಿಗರು
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್​ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.
ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು. ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ. ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
