ಆಗ್ರಾ:ಪ್ರೇಮಸೌಧ ತಾಜ್​ ಮಹಲ್​ ಭೇಟಿ ಮುಗಿಸಿ ದೆಹಲಿಗೆ ತೆರಳಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರಿಗೆ ಉಡುಗೊರೆಯೊಂದನ್ನು ನೀಡುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆತ್ಮೀಯವಾಗೇ ಬೀಳ್ಕೊಟ್ಟರು.
ಎರಡು ದಿನ ಭಾರತ ಪ್ರವಾಸದಲ್ಲಿರುವ ಟ್ರಂಪ್​, ಕುಟುಂಬ ಸಮೇತ ಇಂದು ಬೆಳಗ್ಗೆ ಅಹಮದಾಬಾದ್​ಗೆ ಬಂದಿಳಿದರು. ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ನಮಸ್ತೆ ಟ್ರಂಪ್​ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ತಾಜ್​ ಮಹಲ್​ ವೀಕ್ಷಣೆ ಮಾಡಲು ಆಗ್ರಾಗೆ ತೆರಳಿದರು.
ಸಂಜೆ ನಾಲ್ಕೂವರೆಗೆ ಆಗ್ರಾಗೆ ಬಂದಿಳಿದ ಟ್ರಂಪ್​ ದಂಪತಿಯನ್ನು ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್​ ಮತ್ತು ಸಿಎಂ ಯೋಗಿ ಆದಿತ್ಯನಾಥ್​ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿ ಕಾರು ಹತ್ತಿ ತಾಜ್​ ಮಹಲ್​ಗೆ ತೆರಳಿದ ಟ್ರಂಪ್​ ದಂಪತಿ ವಿಶ್ವದ ಅದ್ಭುತಗಳಲ್ಲಿ ಒಂದಾದ ಪ್ರೇಮಸೌಧವನ್ನು ಕಣ್ತುಂಬಿಕೊಂಡರು. ಅಲ್ಲದೆ, ತಾಜ್​ ಮಹಲ್​ ಮುಂದೆ ನಿಂತು ಕ್ಯಾಮರಾಗೆ ಪೋಸ್​​ ನೀಡುವ ಮೂಲಕ ಭೇಟಿಯನ್ನು ಮತ್ತಷ್ಟು ಸ್ಮರಣೀಯವಾಗಿಸಿದರು. ಅಂದಾಜು ಎರಡು ತಾಸು ತಾಜ್​ ಮಹಲ್​ ವೀಕ್ಷಿಸಿದ ಟ್ರಂಪ್​ ದಂಪತಿ ಆಗ್ರಾದಿಂದ ಸಂಜೆ 7 ಗಂಟೆ ಸುಮಾರಿಗೆ ದೆಹಲಿಯತ್ತ ಪ್ರಯಾಣ ಬೆಳೆಸಿದರು.
ಟ್ರಂಪ್​ ದೆಹಲಿಗೆ ತೆರಳುವ ಮುನ್ನ ಸಿಎಂ ಯೋಗಿ ಆದಿತ್ಯನಾಥ್​ ಅವರು ತಾಜ್​ ಮಹಲಿನ ಸುಂದರ ಫೋಟೋವನ್ನು ಉಡುಗೊರೆಯಾಗಿ ನೀಡಿ, ಆತ್ಮೀಯವಾಗೇ ಬೀಳ್ಕೊಟ್ಟರು.(ಏಜೆನ್ಸೀಸ್​)
Agra: Uttar Pradesh Chief Minister Yogi Adityanath presents a large portrait of 'Taj Mahal' to US President Donald Trump & First Lady Melania Trump, as they depart for Delhi.pic.twitter.com/IzVCbyOlRi
— ANI (@ANI)February 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 5 =
Remember me
