ಲಖನೌ: ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ (ಆ.5) ಭರದಿಂದ ಸಿದ್ಧತೆ ನಡೆದಿದ್ದು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಅಯೋಧ್ಯೆಗೆ ಭೇಟಿ ತಯಾರಿ ಪರಿಶೀಲನೆ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದು, ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಆದಿತ್ಯನಾಥ ಕಳೆದ ವಾರವೂ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದರು. ಕಟ್ಟೆಚ್ಚರ ವಹಿಸುವಂತೆ ಸಿಎಂ ಆದಿತ್ಯನಾಥ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಯಾವುದೇ ಸಮಾಜ-ವಿರೋಧಿ ಶಕ್ತಿಗಳು ಸಮಸ್ಯೆ ಸೃಷ್ಟಿಸದಂತೆ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ. ಕೋವಿಡ್-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಐದಕ್ಕಿಂತ ಹೆಚ್ಚು ಜನರು ಸೇರದಂತೆ ಮನವಿ ಮಾಡಲಾಗಿದೆ ಎಂದು ಅಯೋಧ್ಯೆಯ ವಿಶೇಷ ಎಸ್​ಪಿ ತಿಳಿಸಿದ್ದಾರೆ.
ಇದನ್ನೂ ಓದಿ:VIDEO: ಶ್ರೀ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆಗೆ ದಿನಗಣನೆ: ಅಯೋಧ್ಯೆಯ ಸಂಭ್ರಮ ಸಡಗರ
ಕಲ್ಯಾಣ್ ಸಿಂಗ್ ಹೆಮ್ಮೆ:1992 ಡಿ. 6ರಂದು ಅಯೋಧ್ಯೆಯಲ್ಲಿ ಕರ ಸೇವಕರ ಮೇಲೆ ಗೋಲಿಬಾರ್ ಮಾಡಲು ಅನುಮತಿ ನಿರಾಕರಿಸಿದ್ದಕ್ಕೆ ತಮಗೆ ಹೆಮ್ಮೆಯಿದೆ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹೇಳಿದ್ದಾರೆ. ಆ ದಿನ ಸಾವಿರಾರು ಜನರು ವಿವಾದಿತ್ದ ಬಾಬರಿ ಕಟ್ಟಡವನ್ನು ನೆಲಸಮ ಮಾಡಿದ್ದರು. ಪ್ರತಿಭಟನೆ ಕೈ ಮೀರಿ ಹೋಗಿ ಕರ ಸೇವಕರು ಮಸೀದಿಯನ್ನು ಧ್ವಂಸಗೊಳಿಸಿದ್ದರು. ಅದಾದ ಬೆನ್ನಲ್ಲೇ ಸಿಂಗ್ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು.‘
ಇದನ್ನೂ ಓದಿ:ಕರೊನಾ ಔಷಧ ಸಂಬಂಧ ಬಿಎಂಸಿಆರ್​ಐ ನೋಟಿಸ್: ಡಾ.ಗಿರಿಧರ ಕಜೆ ಮೊದಲ ಪ್ರತಿಕ್ರಿಯೆ….
ಆಡ್ವಾಣಿಗೆ ಆಹ್ವಾನ:ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ರಾಮಮಂದಿರದ ಭೂಮಿಪೂಜೆಯ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ದೂರವಾಣಿ ಮೂಲಕ ಆಹ್ವಾನಿಸಲಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ. ಈ ಇಬ್ಬರೂ ಮುಖಂಡರನ್ನು ನಿರ್ಲಕ್ಷಿಸಲಾಗಿದ್ದು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಹೇಳಲಾಗಿತ್ತು. ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮಾಜಿ ಸಿಎಂಗಳಾದ ಕಲ್ಯಾಣ್ ಸಿಂಗ್, ಉಮಾ ಭಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಮುಖರು. (ಏಜೆನ್ಸೀಸ್)
PHOTOS: ಶ್ರೀರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸದ ತಯಾರಿ ಸಂಭ್ರಮದಲ್ಲಿ ಜಗಮಗಿಸುತ್ತಿದೆ ಅಯೋಧ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
