ನವದೆಹಲಿ:ಬಿಹಾರ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಕರೊನಾ ಲಸಿಕೆಯನ್ನು ಉಚಿತವಾಗಿ ವಿತರಿಸುವ ಭರವಸೆ ನೀಡಿರುವುದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಆರ್​ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಸಲ್ಲಿಸಿದ್ದ ದೂರಿಗೆ ಪ್ರತಿಕ್ರಿಯಿಸಿರುವ ಆಯೋಗ, ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಪ್ರಕಟಿಸುವ ಪ್ರಣಾಳಿಕೆ ಕುರಿತಂತೆ ಮಾದರಿ ನೀತಿ ಸಂಹಿತೆಯ 8ನೇ ಭಾಗದಲ್ಲಿ ವಿವರಿಸಲಾಗಿದೆ. ಇದರಲ್ಲಿನ ನಿಬಂಧನೆಗಳನ್ನು ಪರಿಶೀಲಿಸಲಾಗಿದ್ದು, ಲಸಿಕೆ ಉಚಿತವಾಗಿ ವಿತರಿಸುವ ಭರವಸೆ ಯಾವುದೇ ನಿಯಮದ ಉಲ್ಲಂಘನೆಯಲ್ಲ ಎಂದು ಸ್ಪಷ್ಟಪಡಿಸಿದೆ.
ಸಂವಿಧಾನದ ನಾಲ್ಕನೇ ಭಾಗದಲ್ಲಿ ಉಲ್ಲೇಖಿಸಲಾಗಿರುವ ರಾಜ್ಯಾಂಗದ ನೀತಿ ನಿರ್ದೇಶನ ತತ್ವದಲ್ಲಿ ಜನರ ಕಲ್ಯಾಣಕ್ಕೆ ರಾಜ್ಯ ಸರ್ಕಾರಗಳೂ ಯೋಜನೆ ರೂಪಿಸುವ ಅಧಿಕಾರ ಹೊಂದಿವೆ. ಹೀಗಾಗಿ ಇಂಥ ಯೋಜನೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲು ಆಕ್ಷೇಪ ಇಲ್ಲ. ಆದರೆ, ಯಾವುದು ಈಡೇರಿಸಲು ಸಾಧ್ಯವೋ ಅಂಥ ಭರವಸೆಗಳನ್ನು ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ನೀಡಬೇಕು ಎಂದು ಆಯೋಗ ತಿಳಿಸಿದೆ.
ಕರೊನಾ ಔಷಧವನ್ನು ಒಂದು ರಾಜ್ಯಕ್ಕೆ ಉಚಿತವಾಗಿ ವಿತರಿಸುವ ಘೋಷಣೆಯು ತಾರತಮ್ಯದಿಂದ ಕೂಡಿದೆ. ಚುನಾವಣಾ ಸಮಯದಲ್ಲಿ ಕೇಂದ್ರ ಸರ್ಕಾರದಿಂದ ಅಧಿಕಾರ ದುರುಪಯೋಗವಾಗಿದೆ. ಇದನ್ನು ಚುನಾವಣಾ ಆಯೋಗ ಉಪೇಕ್ಷಿಸಿರುವುದು ಆಘಾತಕಾರಿ ಎಂದು ಟ್ವೀಟ್​ನಲ್ಲಿ ಸಾಕೇತ್ ಆರೋಪಿಸಿದ್ದರು.
ಏನಿದು ಆರೋಪ?: ಕೋವಿಡ್-19 ಲಸಿಕೆಗೆ ಐಸಿಎಂಆರ್ ಅನುಮೋದನೆ ನೀಡಿದ ನಂತರ ಇದನ್ನು ರಾಜ್ಯದಲ್ಲಿ ಉಚಿತವಾಗಿ ಹಂಚಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಸಾಂಕ್ರಾಮಿಕದ ಸಂದರ್ಭವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
