ಲಖನೌ:ದೇಸಾದ್ಯಂತ ಸದ್ದು ಮಾಡಿದ್ದ ಉಡುಪಿ ಹಾಸ್ಟೆಲ್​ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆಯೊಂದು ಉತ್ತರಪ್ರದೇಶದ ಗಾಜಿಪುರ ಜಿಲ್ಲೆಯ ಸರ್ಕಾರಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.
ಹಾಸ್ಟೆಲ್​ನಲ್ಲಿರುವ ಸಹಪಾಠಿಗಳ ಖಾಸಗಿ ಫೋಟೋ ಹಾಗೂ ವಿಡಿಯೋವನ್ನೂ ಮೊಬೈಲ್​ ಫೋನಿನಲ್ಲಿ ಚಿತ್ರೀಕರಿಸಿ ವಿದ್ಯಾರ್ಥಿನಿಯೋರ್ವಳು ಅದನ್ನು ಕಾಲೇಜ್​ ಸೀನಿಯರ್​ಗಳಿಗೆ ಕಳುಹಿಸಿ ಬ್ಲ್ಯಾಕ್​​​​​​ಮೇಲ್​ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಮಂತಾಶಾ ಕಜ್ಮಿ ಹಾಗೂ ಮೊಹಮ್ಮದ್​ ಅಮೀರ್​ ಎಂಬಾತನನ್ನೂ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಮೊಬೈಲ್​ ಫೋನ್, ಲ್ಯಾಪ್​ಟಾಪ್​ ಹಾಗೂ ಎಲೆಕ್ಟ್ರಾನಿಕ್​ ಉಪಕರಣಗಳನ್ನೂ ವಶಕ್ಕೆ ಪಡೆಯಲಾಗಿದೆ.
ಗಾಜಿಪುರದಲ್ಲಿರುವ ಸರ್ಕಾರಿ ಹೋಮಿಯೋಪತಿ ಕಾಲೇಜಿನ ಮೊದಲನೇ ವರ್ಷದ ವಿದ್ಯಾರ್ಥಿನಿ ಮಂತಾಶಾ ಕಜ್ಮಿ ಹಾಸ್ಟೆಲ್​ನಲ್ಲಿ ವಾಸವಿದ್ದ ತನ್ನ ಸಹಪಾಠಿಗಳ ಖಾಸಗಿ ಫೋಟೋ ಹಾಗೂ ವಿಡಿಯೋವನ್ನೂ ಚಿತ್ರೀಕರಿಸಿ ಬಳಿಕ ಅದನ್ನು ಆಕೆಯ ಸೀನಿಯರ್​ ಮೊಹಮ್ಮದ್​ ಅಮೀರ್​ ಎಂಬಾತನಿಗೆ ಕಳುಹಿಸುತ್ತಿದ್ದಳು.
ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿಗಳು ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಫೋಟೋ ಹಾಗೂ ವಿಡಿಯೋಗಳನ್ನೂ ತೋರಿಸಿ ಬ್ಲ್ಯಾಕ್​ಮೇಲ್​ ಮಾಡಲು ಶುರು ಮಾಡಿದ್ದಾರೆ. ನೊಂದ ವಿದ್ಯಾರ್ಥಿನಿಯರು ಈ ಕುರಿತು ಪೊಲೀಸರಿಗೆ ಹಾಗೂ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಅವರ ಬಳಿ ಇದ್ದ ಮೊಬೈಲ್​ ಫೋನ್, ಲ್ಯಾಪ್​ಟಾಪ್​ ಹಾಗೂ ಎಲೆಕ್ಟ್ರಾನಿಕ್​ ಉಪಕರಣಗಳನ್ನೂ ವಶಕ್ಕೆ ಪಡೆದಿದ್ದಾರೆ. ಕಾಲೇಜು ಆಡಳಿತ ಮಂಡಳಿ ಈ ಇಬ್ಬರು ವಿದ್ಯಾರ್ಥಿನಿಗಳನ್ನೂ ಆರು ತಿಂಗಳ ಕಾಲ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಕವಾಡಿಗರಹಟ್ಟಿ ವಿಷಜಲ ದುರಂತ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ
ವಿಡಿಯೋ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಗಾಜಿಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಓಂವೀರ್​ ಸಿಂಗ್​ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿತ ವಿದ್ಯಾರ್ಥಿಗಳಿಬ್ಬರು ತಮ್ಮ ಮೊಬೈಲ್​ ಫೋನ್​ಗಳನ್ನೂ ಫಾರ್ಮ್ಯಾಟ್​ ಮಾಡಿದ್ದಾರೆ.
ಈ ಸಂಬಂಧ ಅಧಿಕಾರಿಗಳು ತಂಡ ಅಳಿಸಿಹೋಗಿರುವ ಡೇಟಾ ರಿಟ್ರೈವ್​ ಮಾಡುವುದರಲ್ಲಿ ನಿರತವಾಗಿದ್ದು, ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಗಾಜಿಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಓಂವೀರ್​ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
