ಪುಣೆ:ಪಾಠ ಮಾಡುವ ವೇಳೆ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಕಾಲೇಜು ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು ಎಬಿವಿಪಿ ಹಾಗೂ ಆರ್​ಎಸ್​ಎಸ್​ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ಧಾರೆ.
ಇದನ್ನೂ ಓದಿ:ಸೈಬರ್​ ಕ್ರೈಂ ಇನ್ಸ್​ಪೆಕ್ಟರ್, ಸಿಬ್ಬಂದಿಯನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿಲ್ಲ: ಡಿಸಿಪಿ ಎಸ್​. ಗಿರೀಶ್​
ಸಿಮ್​ಬೈಯೋಸಿಸ್​ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್​ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಶೋಕ್​ ಧೋಲೆ(43) ತರಗಿತಯಲ್ಲಿ ಪಾಠ ಮಾಡುವ ವೇಳೆ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋವನ್ನು ವಿದ್ಯಾರ್ಥಿಯೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡಿದ್ದರು.
ಈ ಸಂಬಂಧ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​(ABVP), ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಸದಸ್ಯರು ಪ್ರತಿಭಟನೆ ನಡೆಸಿ ಡೆಕ್ಕನ್​ ಜಿಮ್ಖಾನಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಿಕ್ಷಕನ ವಿರುದ್ಧ ಭಾರತ ದಂಡ ಸಂಹಿತೆ(IPC Section) 295ರ ಅಡಿಯಲ್ಲಿ ಬಂಧಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
