ಲಖನೌ:ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಲಖನೌನಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು ಆದಿತ್ಯ ದೇವ್​ ಪಾಠಕ್​ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹತ್ಯೆಯಾದ ಯುವತಿಯನ್ನು ನಿಶಿತಾ (23) ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಪೊಲೀಸ್​ ಆಯುಕ್ತ (ಪೂರ್ವ) ಸೈಯದ್ ಅಲಿ ಅಬ್ಬಾಸ್​, ಯುವತಿ ನಿಶಿತಾ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಆದಿತ್ಯನನ್ನು ಭೇಟಿಯಾಗಲು ಆತನ ರೂಮ್​ಗೆ ತೆರಳಿದ್ದಾಳೆ. ಈ ವೇಳೆ ಇಬ್ಬರ ನಡುವೆ ವಿಚಾರ ಒಂದಕ್ಕೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆರೋಪಿ ತನ್ನ ಬಳಿ ಇದ್ದ ಪಿಸ್ತೂಲ್​ನಿಂದ ಯುವತಿಯ ಮೇಲೆ ಗುಂಡು ಹಾರಿಸಿದ್ದಾನೆ.
ಇದನ್ನೂ ಓದಿ:ಮುಸ್ಲಿಂ ವಿರೋಧ ಹೇಳಿಕೆ; ಸಂಸದ ರಮೇಶ್​ ಬಿಧೂರಿ ವಿರುದ್ಧ ಶೋಕಾಸ್​ ನೋಟಿಸ್ ಜಾರಿ ಮಾಡಿದ ಬಿಜೆಪಿ
ಬಳಿಕ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಪರಾರಿಯಾಗಿದ್ದಾನೆ. ಗುಂಡೇಟು ತಿಂದು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ಚಿನಹತ್​ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಬಳಿ ಇದ್ದ ನಾಡ ಪಿಸ್ತೂಲ್​ಅನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿ ವಿರುದ್ಧ ಭಾರತ ದಂಡ ಸಂಹಿತೆ (IPC Section) 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಉಪ ಪೊಲೀಸ್​ ಆಯುಕ್ತ (ಪೂರ್ವ) ಸೈಯದ್ ಅಲಿ ಅಬ್ಬಾಸ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
