ಬಿಹಾರ:ಬಿಹಾರದ ಅರಾ ರೈಲ್ವೆ ನಿಲ್ದಾಣದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರ ಹೊಡೆದಾಟ ನಡೆದಿದೆ. ಈ ಘಟನೆಯನ್ನು ಸ್ಥಳೀಯರೊಬ್ಬರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶ ವಿರೋಧಿ ಚುಟವಟಿಕೆಗಳು ಹೆಚ್ಚಳ: ವಿಜಯೇಂದ್ರ
ಮಾಹಿತಿಯ ಪ್ರಕಾರ, ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ನಡುವೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಮಾತಿನ ಜಟಾಪಟಿ ತಾರಕಕ್ಕೇರುತ್ತಿದ್ದಂತೆ ದೈಹಿಕವಾಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಕಪಾಳಮೋಕ್ಷ ಮಾಡಿಕೊಂಡಿದ್ದು, ಇಬ್ಬರ ಜಗಳವನ್ನು ತಡೆಯಲು ಮತ್ತೊಬ್ಬ ಹುಡುಗಿ ಮಧ್ಯಪ್ರವೇಶಿಸಿ ಶಾಂತಗೊಳಿಸಲು ಪ್ರಯತ್ನಿಸಿದ್ದಾಳೆ.
ಇದನ್ನೂ ಓದಿ:ಸಣ್ಣ ಪುಸ್ತಕಕ್ಕೂ ಇತಿಹಾಸದ ಗತಿ ಬದಲಿಸುವ ಸಾಮರ್ಥ್ಯವಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ವಿದ್ಯಾರ್ಥಿನಿಯರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಹುಡುಗಿಯರ ಗುರುತು ಮತ್ತು ಅವರ ವಿಳಾಸದ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).
ಐಟಂ ಸಾಂಗ್​ಗೆ ಟಾಪ್​ ನಾಯಕಿಯರ ಹುಡುಕಾಟದಲ್ಲಿದೆ ‘ಪುಷ್ಪಾ 2’ ಚಿತ್ರತಂಡ; ಯಾವ ನಟಿಗೆ ಸಿಗಲಿದೆ ಈ ಅವಕಾಶ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
