ಬೆಂಗಳೂರು:ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಮುಗಿದಿವೆ. ವಿದ್ಯಾರ್ಥಿಗಳು ಅವರ ಪಾಲಕರು, ಹಾಗೂ ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಆಗಸ್ಟ್​ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಆದರೆ, ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಜು.31ರವರೆಗೆ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಅವಕಾಶವಿಲ್ಲವೆಂದು ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದೆ.
ಇದನ್ನೂ ಓದಿ;ಧರಾಶಾಯಿಯಾಯ್ತು ಬಿಗ್​ ಬಿ ಮನೆಯ 43 ವರ್ಷಗಳ ಇತಿಹಾಸ…!
ಈ ನಡುವೆ, ಕಾಲೇಜು ಹಾಗೂ ವಿಶ್ವ ವಿದ್ಯಾಲಯಗಳ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಪಂಜಾಬ್​ ಸರ್ಕಾರ ಘೋಷಿಸಿದೆ. ಈ ಹಿಂದಿನ ಪರೀಕ್ಷೆಗಳ ಸಾಧನೆಯನ್ನು ಆಧರಿಸಿ ಫಲಿತಾಂಶ ನೀಡಲಾಗುವುದು ಎಂದು ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಹೇಳಿದ್ದಾರೆ.
ಫೇಸ್​ಬುಕ್ ಲೈವ್​​ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಿಎಂ, ಈ ವಿಷಯ ಪ್ರಕಟಿಸಿದ್ದಾರೆ. ಆದರೆ, ಈಗಾಗಲೇ ಎಲ ವಿವಿಗಳು ಆನ್​ಲೈನ್​ ಮೂಲಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಅವುಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ;ಎದುರು ಬಂದವರ ಧರ್ಮ ಕೇಳಿ ಕೊಂದರು; ಶವಗಳನ್ನು ಚರಂಡಿಗೆಸೆದರು; ಪ್ರತ್ಯಕ್ಷದರ್ಶಿಗಳಿಂದ ಪೈಶಾಚಿಕತೆ ಅನಾವರಣ
ಇದರ ಹೊರತಾಗಿಯೂ ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಕರೊನಾ ಸಂಕಷ್ಟ ಮುಗಿದ ಬಳಿಕ ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ವಿವಿಗಳು ಹಾಗೂ ಕಾಲೇಜುಗಳು ಸರ್ಕಾರದ ಈ ನಿರ್ಧಾರವನ್ನು ಜಾರಿಗೊಳಿಸಲು ಸಿದ್ಧತೆಗಳನ್ನು ನಡೆಸುತ್ತಿವೆ. ಪರೀಕ್ಷೆಗಳು ರದ್ದಾಗಿದ್ದರೂ ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನು ಮುಂದುವರಿಸಬೇಕೆಂದು ಮನವಿ ಮಾಡಿದ್ದಾರೆ.
ಕರೊನಾ ಸೋಂಕು ಖಚಿತವಾದರೆ… ಮುಂದೇನು? ಈ ವಿಷಯಗಳನ್ನು ಅಗತ್ಯವಾಗಿ ತಿಳಿದಿರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 11 =
Remember me
