ವಾರಣಾಸಿ:ದೇಶದಲ್ಲಿ 18ನೇ ಸಾರ್ವತ್ರಿಕ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚುನಾವಣೆಯ ಕಣ ಮಾತ್ರ ರಂಗೇರುತ್ತಿರುವುದು ಸುಳ್ಳಲ್ಲ. ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಎದುರು ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಖ್ಯಾತ ಕಾಮಿಡಿಯನ್​ ಶ್ಯಾಮ್​ ರಂಗೀಲಾ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿದ ಶ್ಯಾಮ್​ ರಂಗೀಲಾ, ನಾನು ಪ್ರಧಾನಿ ಮೋದಿ ಎದುರು ವಾರಣಾಸಿಯಲ್ಲಿ ಸ್ಪರ್ಧಿಸುತ್ತೇನೆ. ಕೆಲವರು ನಾನು ತಮಾಷೆ ಮಾಡುತ್ತಿದ್ದೇನೆ ಎಂದುಕೊಂಡಿದ್ದಾರೆ. ಆದರೆ, ಇದು ನಿಜ ಶೀಘ್ರದಲ್ಲೇ ನಾಮಪತ್ರ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ನಾನು ಚುನಾವಣೆಗೆ ಸ್ಪರ್ಧಿಸಲು ಕಾರಣವಿದೆ ಎಂದು ಹೇಳಿದ್ದಾರೆ.
वाराणसी मैं आ रहा हूँ…#ShyamRangeelaForVaranasipic.twitter.com/8BOFx4nnjn
ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಕಣ್ಣು ಕಳೆದುಕೊಂಡ್ರಾ ರಾಘವ್​ ಚಡ್ಡಾ?; ವಿದೇಶದಲ್ಲಿ ಶಸ್ತ್ರಚಿಕಿತ್ಸೆ
ವಾರಣಾಸಿಯಿಂದ ನಾನು ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ ಬಳಿಕ ಅನೇಕರು ಬೆಂಬಲ ಸೂಚಿಸಿ ನನಗೆ ಕರೆ ಮಾಡುತ್ತಿದ್ದಾರೆ. ಜನರಿಂದ ಸಿಗುತ್ತಿರುವ ಪ್ರೀತಿ ಕಂಡು ನಾನು ಉತ್ಸುಕನಾಗಿದ್ದೇನೆ. ಇತ್ತೀಚಿನ ದಿನಗಳಲ್ಲಿ ಯಾರು ನಾಮಪತ್ರ ಹಿಂಪಡೆಯುತ್ತಾರೆ ಎಂಬುದು ನನಗೆ ತಿಳಿದಿಲ್ಲ. ನಾನು ವಾರಣಾಸಿಯಿಂದ ಸ್ಪರ್ಧಿಸುವುದು ಖಚಿತ ಎಂದಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿರುವ ಪ್ರತಿಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದರೂ ನಾನು ಯಾವುದೇ ಬೆಲೆ ತೆತ್ತಾದರೂ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಾನು ಪ್ರಧಾನಿ ಎದುರು ಪ್ರಸಿದ್ಧನಾಗಲು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ, ನಾನು ಈಗಾಗಲೇ ಸಾರ್ವಜನಿಕರಲ್ಲಿ ಬಹಳ ಪ್ರಸಿದ್ಧನಾಗಿದ್ದೇನೆ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಕಾಮಿಡಿಯನ್​ ಶ್ಯಾಮ್​ ರಂಗೀಲಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − five =
Remember me
