ಬೆಂಗಳೂರು:ಕರ್ನಾಟಕದ ಖಾಸಗಿ ಕಾಲೇಜುಗಳು ಮತ್ತು ಆಯ್ದ ಪ್ಯಾನ್-ಇಂಡಿಯಾ ವಿಶ್ವವಿದ್ಯಾಲಯಗಳಲ್ಲಿ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಾಳೆ 2023ರ ಕಾಮೆಡ್​ಕೆ ಯುಜಿಇಟಿ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಇ ಸ್ವತ್ತು ಕುರಿತಂತೆ ಸಾಕಷ್ಟು ದೂರು: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅಸಮಾಧಾನ
ಸುಮಾರು 150 ಎಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದ್ದು, ಇದು ಎರಡು ಅವಧಿಗಳಲ್ಲಿ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮೊದಲ ಸೇಷನ್​ ಹಾಗೂ ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಎರಡನೇ ಸೇಷನ್ ನಡೆಯಲಿದೆ.
ದೇಶದ ಒಟ್ಟು 180 ನಗರಗಳ 264 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ ಒಟ್ಟು 90,607 ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಯಿಸಿಕೊಂಡಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಟಿಕೆಟ್, ಎರಡು ಪಾಸ್‌ಪೋರ್ಟ್ ಗಾತ್ರದ ಫೋಟೋ, ಅರ್ಜಿಯಲ್ಲಿ ಘೋಷಿಸಿದಂತೆ ID ಪುರಾವೆ, ಪಾರದರ್ಶಕ ನೀರಿನ ಬಾಟಲಿ ಮತ್ತು ಪೆನ್ಸಿಲ್​ನ್ನು ಮಾತ್ರ ಪರೀಕ್ಷಾ ಹಾಲ್‌ಗೆ ಕೊಂಡೊಯ್ಯಬಹುದು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
