ಮುಂಬೈ:ದಿ ಕಪಿಲ್ ಶರ್ಮಾ ಶೋ ಕಾರ್ಯಕ್ರಮದ ಮೂಲಕ ಹೆಸರು ಗಳಿಸಿದ ಹಾಸ್ಯನಟನೊಬ್ಬ ಫೇಸ್​ಬುಕ್​ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಇದನ್ನೂ ಓದಿ:ತವರಿನಲ್ಲಿದ್ದ ಪತ್ನಿಯನ್ನು ಕರೆತರಲು ಹೋಗಿ ಅತ್ತೆಯ ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿದ್ದ ಅಳಿಯ ಅಂದರ್​
ತೀರ್ಥಾನಂದ್ ರಾವ್ ಆತ್ಮಹತ್ಯೆಗೆ ಯತ್ನಿಸಿದ ಹಾಸ್ಯನಟನಾಗಿದ್ದು, ತನಗೆ ಏನಾದರೂ ಸಂಭವಿಸಿದಲ್ಲಿ ತನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಹಿಳೆಯೇ ಕಾರಣ ಎಂದು ಹೇಳಿದ್ದಾರೆ. ತನಗೆ ಕಳೆದ ವರ್ಷ ಅಕ್ಟೋಬರ್‌ನಿಂದ ಪರಿಚಯವಿರುವ ಮಹಿಳೆಯೊಬ್ಬಳು ತನ್ನಿಂದ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದಾಳೆ.
ಈಗಾಗಲೇ ತಾನು 3-4 ಲಕ್ಷ ರೂಪಾಯಿ ಸಾಲದಲ್ಲಿ ಸಿಲುಕಿದ್ದೇನೆ. ಅವಳು ನನ್ನ ವಿರುದ್ಧ ಭಾಯಂದರ್‌ನಲ್ಲಿ ಪೊಲೀಸ್ ದೂರು ನೀಡಿದ್ದಾಳೆ. ಇದರ ಹಿಂದಿನ ಕಾರಣ ಮತ್ತು ಉದ್ದೇಶ ತನಗೆ ತಿಳಿದಿಲ್ಲ. ಅವಳು ತನಗೆ ಕರೆ ಮಾಡಿ ತಾನು ಭೇಟಿಯಾಗಬೇಕೆಂದು ಹೇಳುತ್ತಿದ್ದಳು ಎಂದು ಹೇಳಿ ವಿಷ ಕುಡಿದಿದ್ದಾರೆ.
ಕೂಡಲೇ ಆತನ ಸ್ನೇಹಿತರು ಹಾಗೂ ಸಹೋದ್ಯೋಗಿಗಳು ರಾವ್​ ಮನೆಗೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನಟನನ್ನು ಆಸತ್ರೆಗೆ ಸೇರಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಒಂದೆರೆಡು ವೆಬ್ ಸೀರಿಸ್ ಮಾಡಿದರೂ ಸಂಭಾವನೆ ನೀಡಿಲ್ಲ ಎಂದು ಆರೋಪಿಸಿರುವ ರಾವ್​, ಖಾಲಿ ಹೊಟ್ಟೆಯಲ್ಲಿ ಮಲಗುವ ದಿನಗಳು ಎದುರಾಗಿವೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
