ನವದೆಹಲಿ:ಸರ್ಕಾರಿ ಒಡೆತನದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನವೆಂಬರ್​ 1ರ ಬುಧವಾರದಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಹೆಚ್ಚಳ ಮಾಡಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಲಿದೆ.
ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಸಿಲಿಂಡರಿನ ಬೆಲೆಯಲ್ಲಿ ಎರಡು ಬಾರಿ ಅಧಿಕವಾಗಿದೆ. ಅಂದಹಾಗೆ ವಾಣಿಜ್ಯ ಮತ್ತು ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್‌ಗಳ ದರಗಳು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಪಡುತ್ತವೆ. ಅದರಂತೆ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 100 ರೂ. ದುಬಾರಿಯಾಗಿದ್ದರೆ, ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್​ ದರದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.
ಇತ್ತೀಚಿನ ದರ ಪರಿಷ್ಕರಣೆಯೊಂದಿಗೆ 19 ಕೆಜಿ ತೂಕದ ವ್ಯಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1731 ರೂ.ನಿಂದ 1833 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1785.50 ರೂ., ಕೋಲ್ಕತದಲ್ಲಿ 1943 ರೂ., ಚೆನ್ನೈನಲ್ಲಿ 1999.50 ರೂ., ಮತ್ತು ಬೆಂಗಳೂರಿನಲ್ಲಿ 1914.50 ರೂಪಾಯಿಗೆ ಏರಿಕೆಯಾಗಿದೆ.
ಅಕ್ಟೋಬರ್‌ 1ರಂದು ತೈಲ ಕಂಪನಿಗಳು ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ದರದಲ್ಲಿ 209 ರೂ.ಗಳಷ್ಟು ಏರಿಕೆ ಮಾಡಿತ್ತು. ಕಳೆದ ತಿಂಗಳು 19 ಕೆಜಿ ತೂಕದ ಸಿಲಿಂಡರ್​ ಬೆಲೆ ಮುಂಬೈನಲ್ಲಿ 1,684 ರೂ., ಕೋಲ್ಕತ್ತಾದಲ್ಲಿ 1,839.50 ರೂ. ಮತ್ತು ಚೆನ್ನೈನಲ್ಲಿ 1,898 ರೂ. ಇತ್ತು.
ಆದಾಗ್ಯೂ, ಗೃಹಬಳಕೆಯ ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್‌ಗೆ 903 ರೂ. ಇದೆ. ಬೆಂಗಳೂರಿನಲ್ಲಿ 905 ರೂಪಾಯಿ ಇದೆ.(ಏಜೆನ್ಸೀಸ್​)
ಬೆಳಗ್ಗೆ ಎದ್ದ ತಕ್ಷಣ ಧೂಮಪಾನ ಮಾಡ್ತೀರಾ? ಹಾಗಾದರೆ ಈ ಕಾಯಿಲೆ ಬರಬಹುದು ಎಚ್ಚರ!

ಕನ್ನಡಕ್ಕೆ ಬಲ ಕಾಯ್ದೆ ಶೀಘ್ರ ಜಾರಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಈ ತಿಂಗಳಲ್ಲೇ ಅನುಷ್ಠಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 12 =
Remember me
