ನವದೆಹಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಕೃಷಿ ಸಚಿವಾಲಯದ ಬಜೆಟ್ ಮೌಲ್ಯ 11 ಪಟ್ಟು ಹೆಚ್ಚಳವಾಗಿದೆ. 2009-10ರಲ್ಲಿ ಯುಪಿಎ ಸರ್ಕಾರವಿದ್ದಾಗ 12 ಸಾವಿರ ಕೋಟಿ ರೂಪಾಯಿ ಇದ್ದ ಕೃಷಿ ಬಜೆಟ್ ಮೌಲ್ಯ ಇದೀಗ 1.34 ಲಕ್ಷ ರೂಪಾಯಿಗೆ ಏರಿಕೆಯಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ.
ನೂತನ ಕೃಷಿ ಮಸೂದೆಗಳಿಂದಾಗಿ ಬೆಳೆಗಳಿಗೆ ಈಗ ಸಿಗುತ್ತಿರುವ ಬೆಂಬಲ ಬೆಲೆ ನಿಂತುಹೋಗುತ್ತದೆ ಎಂದು ವಿರೋಧ ಪಕ್ಷಗಳು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿವೆ. ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಎನ್‌ಡಿಎ ಸರ್ಕಾರದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ.
ಇದೀಗ ಅಂಗೀಕಾರವಾಗಿರುವ ಕಾರ್ಮಿಕ ಮಸೂದೆಗಳು ಕಾರ್ಮಿಕರನ್ನು ಸ್ವಾವಲಂಬಿ ಮಾಡುವ ಉದ್ದೇಶ ಹೊಂದಿದೆ. ಇದರಿಂದಾಗಿ ವ್ಯಾವಹಾರಿಕ ಕ್ಷೇತ್ರವು ಇನ್ನಷ್ಟು ಸುಲಭವಾಗಲಿದೆ. ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ದೇಶವನ್ನಾಗಿ ಮಾಡುವ ಉದ್ದೇಶದಿಂದ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − one =
Remember me
