ಬೆಂಗಳೂರು:ಚುನಾವಣಾ ಅಫಿಡೇವಿಟ್​​ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್​​.ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
