ಹೈದರಾಬಾದ್​​ :ತೆಲಂಗಾಣದಲ್ಲಿ ಕರೊನಾ ಲಾಕ್​ಡೌನನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕರೊನಾ ಪಾಸಿಟಿವಿ ರೇಟ್​ನಲ್ಲಿ ಮಹತ್ವದ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಜ್ನರು ನೀಡಿದ ಸಲಹೆಗಳ ಮೇಲೆ ಸಂಪುಟ ಸಭೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಕರೊನಾ ಸೋಂಕು ಹರಡುವಿಕೆಯನ್ನು ಬೇರೆ ರಾಜ್ಯಗಳಿಗಿಂತ ತ್ವರಿತವಾಗಿ ನಿಯಂತ್ರಿಸಲು ಸಾಧ್ಯವಾಗಿದೆ. ದೇಶಾದ್ಯಂತ ಮತ್ತು ನೆರೆಹೊರೆಯ ರಾಜ್ಯಗಳಲ್ಲೂ ಕರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಲಾಕ್​ಡೌನ್​ ಅಂತ್ಯಗೊಳಿಸಲಾಗುತ್ತಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.
ಇದನ್ನೂ ಓದಿ:‘6 ರಿಂದ 8 ವಾರಗಳಲ್ಲಿ ಕರೊನಾ ಮೂರನೇ ಅಲೆ ಸಾಧ್ಯತೆ’
ರಾಜ್ಯದ ಎಲ್ಲಾ ಇಲಾಖೆಗಳಿಗೆ ನಿರ್ಬಂಧಗಳನ್ನು ತೆರವುಗೊಳಿಸಲು ಸರ್ಕಾರ ಆದೇಶಿಸಿದೆ. ಅಷ್ಟೇ ಅಲ್ಲ, ಸಾರ್ವಜನಿಕ ಶಿಕ್ಷಣ ಇಲಾಖೆಗೆ ಎಲ್ಲ ಬಗೆಯ ಶೈಕ್ಷಣಿಕ ಸಂಸ್ಥೆಗಳನ್ನು ಜುಲೈ 1 ರಿಂದ ಪುನರಾಂಭಿಸಲು ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಿ ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಶಾಲಾ ಕಾಲೇಜುಗಳ ಹಾಜರಾತಿ, ಆನ್​ಲೈನ್ ತರಗತಿಗಳು ಮತ್ತು ಇತರ ವಿಚಾರಗಳ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿಗಳನ್ನು ಇಲಾಖೆ ಪ್ರಕಟಿಸಲಿದೆ ಎನ್ನಲಾಗಿದೆ.
ಮತ್ತೆ ಸೋಂಕು ಹೆಚ್ಚಾಗದಂತೆ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿರುವ ಸರ್ಕಾರ, ಮಾಸ್ಕ್​ ತೊಡುವ ಮತ್ತು ಸಾಮಾಜಿಕ ಅಂತರ ಪಾಲಿಸುವ ಕೋವಿಡ್​ ಪ್ರೊಟೊಕಾಲ್​ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿದೆ.(ಏಜೆನ್ಸೀಸ್)
ಪಾಟ್ನದಿಂದ ಲೂಧಿಯಾನಕ್ಕೆ ಗಂಡನನ್ನು ಅರಸಿ ಬಂದ ಯುವತಿ! ಅಪೂರ್ಣ ಮೊಬೈಲ್ ಸಂಖ್ಯೆ ಹಿಡಿದು ಹುಡುಕಾಟ!

ಮತ್ತೆ ಶಾಲೆ ಯಾವಾಗ ತೆರೆಯುತ್ತೆ ? ಕೇಂದ್ರ ಸರ್ಕಾರ ಏನು ಹೇಳುತ್ತೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
