ನವದೆಹಲಿ:ರಾಷ್ಟ್ರಪತಿ ಭವನವು ದರ್ಬಾರ್ ಹಾಲ್ ಮತ್ತು ಅಶೋಕ ಹಾಲ್ ಹೆಸರನ್ನು ಬದಲಾಯಿಸಿರುವುದಾಗಿ ಗುರುವಾರ (ಜುಲೈ 25) ತಿಳಿಸಿದೆ. ಇನ್ನು ಮುಂದೆ ದರ್ಬಾರ್ ಹಾಲ್ ಅನ್ನು ಗಣತಂತ್ರ ಮಂಟಪ ಎಂದೂ ಅಶೋಕ ಹಾಲ್ ಅನ್ನು ಅಶೋಕ ಮಂಟಪ ಎಂದು ಕರೆಯಲಾಗುವುದು. ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗುರುವಾರ(ಜುಲೈ 25) ವಾಗ್ದಾಳಿ ನಡೆಸಿದರು.
ಇದನ್ನು ಓದಿ:ರಾಷ್ಟ್ರಪತಿ ಭವನದ ದರ್ಬಾರ್ ಹಾಲ್, ಅಶೋಕ ಹಾಲ್​ನ ಮರುನಾಮಕರಣ ಮಾಡಿದ ಸರ್ಕಾರ
ದೇಶದಲ್ಲಿ ಶಾಹೆನ್‌ಶಾ (ರಾಜ) ಪರಿಕಲ್ಪನೆಯು ಇನ್ನೂ ಅಸ್ತಿತ್ವದಲ್ಲಿದೆ. ದರ್ಬಾರ್ ಪರಿಕಲ್ಪನೆ ಇಲ್ಲ ಆದರೆ ಶಾಹೆನ್‌ಶಾ ಪರಿಕಲ್ಪನೆ ಇದೆ ವ್ಯಂಗ್ಯ ಮಾಡಿದ್ದಾರೆ. ಅವರು ಕೋಟೆಗಳಲ್ಲಿ ವಾಸಿಸುತ್ತಾರೆ ಮತ್ತು ಸಾಮಾನ್ಯ ಜನರ ಕಷ್ಟವನ್ನು ಎಂದಿಗೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.
#WATCH| Two of the important halls of Rashtrapati Bhavan – namely, ‘Durbar Hall’ and ‘Ashok Hall’ – renamed as ‘Ganatantra Mandap’ and ‘Ashok Mandap’ respectivelyCongress leader Priyanka Gandhi Vadra says, "There is no concept of 'Durbar' but that of 'Shehenshah."pic.twitter.com/kWPNnqtab9
ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ಅನ್ನು ಕ್ರಮವಾಗಿ ಗಣತಂತ್ರ ಮಂಟಪ ಮತ್ತು ಅಶೋಕ ಮಂಟಪ ಎಂದು ಮರುನಾಮಕರಣ ಮಾಡಲಾಗಿದೆ. ಮರುನಾಮಕರಣವು ರಾಷ್ಟ್ರಪತಿ ಭವನದ ವಾತಾವರಣವನ್ನು ಭಾರತೀಯ ಸಾಂಸ್ಕೃತಿಕ ಮೌಲ್ಯಗಳು ಮತ್ತು ನೈತಿಕತೆಯನ್ನು ಪ್ರತಿಬಿಂಬಿಸುವ ನಿರಂತರ ಪ್ರಯತ್ನದ ಭಾಗವಾಗಿದೆ ಎಂದು ಅಧ್ಯಕ್ಷರ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಾಚೀನ ಕಾಲದಿಂದಲೂ ಭಾರತೀಯ ಸಮಾಜದಲ್ಲಿ ಆಳವಾಗಿ ಬೇರೂರಿರುವ ಗಣತಂತ್ರ ಪರಿಕಲ್ಪನೆಯ ಮೂಲಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನದಂತಹ ಪ್ರಮುಖ ಸಮಾರಂಭಗಳು ಮತ್ತು ಆಚರಣೆಗಳನ್ನು ನಡೆಸುವ ಸ್ಥಳವಾದ ದರ್ಬಾರ್ ಹಾಲ್ ಅನ್ನು ಗಣತಂತ್ರ ಮಂಟಪ ಎಂದು ಮರುನಾಮಕರಣ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಕಳೆದ ವರ್ಷವಷ್ಟೇ ಕೇಂದ್ರದ ಮೋದಿ ಸರ್ಕಾರ ರಾಜಪಥದ ಹೆಸರನ್ನು ಕರ್ತವ್ಯಪಥ ಎಂದು ಬದಲಾಯಿಸಿತ್ತು.(ಏಜೆನ್ಸೀಸ್​​)
ಅಬಕಾರಿ ನೀತಿ ಹಗರಣ; ಸಿಎಂ ಕೇಜ್ರಿವಾಲ್, ಮನೀಷ್​ ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + one =
Remember me
