ಲಖನೌ:ದೇಶದಲ್ಲಿ 18ನೇ ಸಾರ್ವತ್ರಿಕ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಮತಬೇಟೆಯಲ್ಲಿ ನಿರತರಾಗಿದ್ದಾರೆ. ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪ ಮಾಡುವುದು ಸಹಜ. ಅದೇ ರೀತಿ ಇದೀಗ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಂಗ್ರೆಸ್​ ವಿರುದ್ಧ​ ಗಂಭೀರವಾದ ಆರೋಪ ಒಂದನ್ನು ಮಾಡಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ.
ಲಖನೌನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಒಂದು ವೇಳೆ ಕಾಂಗ್ರೆಸ್​ ನೇತೃತ್ವದ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಗೋಮಾಂಸ ಸೇವನೆಗೆ ಅವಕಾಶ ನೀಡುವ ಗುರಿ ಹೊಂದಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಎಸ್​​ಆರ್​ಎಚ್​ ವಿರುದ್ಧ ಕೊಹ್ಲಿ ನಿಧಾನಗತಿಯ ಆಟ; ಮಾಜಿ ನಾಯಕ ಹೇಳಿದ್ದಿಷ್ಟು
ಭಾರತದಲ್ಲಿ ಹಿಂದೂ ಧರ್ಮವು ಗೋವುಗಳನ್ನು ಪವಿತ್ರ ಎಂದು ಪರಿಗಣಿಸಿ ಪೂಜಿಸುತ್ತಾರೆ. ಮುಸ್ಲಿಮರಿಗೆ ವಿನಾಯಿತಿ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್​ ಪಕ್ಷವು ಗೋಮಾಂಸ ಸೇವನೆಗೆ ಅವಕಾಶ ಮಾಡಿಕೊಡಲು ಮುಂದಾಗಿದೆ. ಈ ಕ್ರಮವು ಸ್ವೀಕಾರಾರ್ಹವಲ್ಲ ಆದ ಕಾರಣ ಜನರು ಕಾಂಗ್ರೆಸ್​ ಪಕ್ಷವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಧಿಕಾರಕ್ಕೆ ಬಂದರೆ ಸಂಪತ್ತು, ಜಾತಿ ಸಮೀಕ್ಷೆಯನ್ನು ಮಾಡಿಸುವುದಾಗಿ ಕಾಂಗ್ರೆಸ್​ ಪಕ್ಷ ಹೇಳಿದೆ. ಈ ಮೂಲಕ ಕಾಂಗ್ರೆಸ್​ ಒಂದು ಧರ್ಮವನ್ನು ಓಲೈಸಲು ಮುಂದಾಗಿದ್ದು, ಕಾಂಗ್ರೆಸ್​ನ ಈ ಮನೋಭಾವಕ್ಕೆ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
