ನವದೆಹಲಿ:ಕರ್ನಾಟಕ ಚುನಾವಣೆ ಕಾವು ಏರುತ್ತಿದ್ದು, ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಭಾರಿ ಚಟುವಟಿಕೆಗಳು ನಡೆಯಲಾರಂಭಿಸಿವೆ. ಅದರಲ್ಲೂ ಕಾಂಗ್ರೆಸ್​ನ ಘಟಾನುಘಟಿ ನಾಯಕರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಮೋದಿ-ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದವರು ಸುದ್ದಿಗೋಷ್ಠಿ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಅಭ್ಯರ್ಥಿಗಳು, ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ರಾಜ್ಯಾದ್ಯಂತ ದಾಳಿ ನಡೆಸಲು ನೂರಾರು ಐಟಿ ಮತ್ತು ಇಡಿ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಲಾಗಿದೆ ಎಂದು ನಮಗೆ ಮಾಹಿತಿ ಇದೆ ಎಂದ ಸುರ್ಜೆವಾಲ, ಪ್ರಧಾನಿ ಮೋದಿ ತಮ್ಮ ಬತ್ತಳಿಕೆಯಲ್ಲಿರುವ ಅಂತಿಮ ಅಸ್ತ್ರಗಳನ್ನು ಬಳಸಲು ನಿರ್ಧರಿಸಿದ್ದು, ಅವು ಸಹ ದಯನೀಯವಾಗಿ ವಿಫಲವಾಗುತ್ತವೆ ಎಂದಿದ್ದಾರೆ.
ಇದನ್ನೂ ಓದಿ:ಕ್ಷಣಮಾತ್ರದಲ್ಲಿ ಪತ್ನಿಯ ಕಣ್ಣೆದುರೇ ಸಾವಿಗೀಡಾದ ಪತಿ; ಪತ್ನಿಗೆ ಗಂಭೀರ ಗಾಯ
ಪ್ರಧಾನಿ ಮೋದಿ ಮತ್ತು ಅವರ ಇಡಿ ಮತ್ತು ಐಟಿಯ ನಕಲಿ, ಮೋಸದ ಮತ್ತು ಕಲ್ಪಿತ ದಾಳಿಗಳು ಅಧಿಕಾರಕ್ಕೆ ಬರುವ ಅಂಚಿನಲ್ಲಿರುವ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸುವುದಿಲ್ಲ ಎಂದು ತಿಳಿದಿರಬೇಕು ಎಂದು ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
ಇದನ್ನೂ ಓದಿ:‘ಈ ಚುನಾವಣೆಗೆ ಸ್ಪರ್ಧಿಸಲ್ಲ’ ಅಂದ್ರು ಬಿಜೆಪಿಯ ಮತ್ತೊಬ್ಬ ಶಾಸಕ!
ಚುನಾವಣೆ ಹತ್ತಿರ ಬರುತ್ತಿದೆ, ಬಿಜೆಪಿ ತನ್ನ ಅಸ್ತ್ರ ಸಿದ್ಧಪಡಿಸಿಕೊಂಡಿದೆ. ಐಟಿ-ಇಡಿ ಮೂಲಕ ಬೆದರಿಸಲು ಮುಂದಾಗಿದ್ದಾರೆ. ನಮಗೂ ಕಾಲ ಬರಲಿದೆ, ಮುಂದೆ ನಾವೂ ಸುಮ್ಮನೆ ಇರುವುದಿಲ್ಲ. ಐಟಿ-ಇಡಿ ದುರ್ಬಳಕೆ ಮಾಡಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ ಎಂದಿದ್ದಾರೆ. ಮಾತ್ರವಲ್ಲ, ಬಿಜೆಪಿಯ ನಿಲುವಿನ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದೂ ಹೇಳಿದ್ದಾರೆ.
ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
