ನವದೆಹಲಿ:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಳ ವಿಚಾರದಲ್ಲಿ ಬಿಜೆಪಿ ಮತ್ತು ಟಿಎಂಸಿ ಪಕ್ಷಗಳ ಗದ್ದಲ ಮುಗಿಲುಮುಟ್ಟಿದೆ. ಈ ನಡುವೆ ಮತ್ತೊಂದು ಪ್ರಮುಖ ಪ್ರತಿಸ್ಪರ್ಧಿ ಎಂದರೆ ಕಾಂಗ್ರೆಸ್​ ಮತ್ತು ಎಡಪಕ್ಷಗಳ ಒಕ್ಕೂಟ. ಇದೀಗ ಕಾಂಗ್ರೆಸ್ ಬಂಗಾಳದಲ್ಲಿ ತನ್ನ ಪ್ರಚಾರವನ್ನು ದೊಡ್ಡ ಮಟ್ಟದಲ್ಲಿ ಆರಂಭಿಸಲು ಹೊರಟಿದ್ದು, 30 ಸ್ಟಾರ್ ಕಾಂಪೇನರ್​ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಪ್ರಚಾರಕರ್ತರ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸಚಿನ್ ಪೈಲಟ್, ನವಜೋತ್ ಸಿಂಗ್ ಸಿಧು, ಅಭಿಜಿತ್ ಮುಖರ್ಜಿ ಮತ್ತು ಮೊಹಮ್ಮದ್ ಅಜರುದ್ದೀನ್ ಸೇರಿದ್ದಾರೆ. ಕಾಂಗ್ರೆಸ್​ ಪಕ್ಷದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಭೂಪೇಶ್ ಬಾಗೇಲ್ ಕೂಡ ಈ ಪಟ್ಟಿಯಲ್ಲಿದ್ದಾರೆ.
ಇದನ್ನೂ ಓದಿ:ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ ಬಗ್ಗೆ ಪುನರ್​ಚಿಂತನೆ
ಗಮನಾರ್ಹ ಸಂಗತಿಯೆಂದರೆ ಕಾಂಗ್ರೆಸ್​ನ ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಕಪಿಲ್ ಸಿಬಲ್ ಮತ್ತು ಮನೀಶ್ ತಿವಾರಿ ಸೇರಿದಂತೆ ಪ್ರಮುಖ ಜಿ -23 ಸದಸ್ಯರನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಜಿ-23 ನಾಯಕರು, ‘ಬಲಹೀನಗೊಳ್ಳುತ್ತಿರುವ ಕಾಂಗ್ರೆಸ್​​ಗೆ ಪರಿಣಾಮಕಾರಿ ನೇತೃತ್ವದ ಅಗತ್ಯ ಇದೆ’ ಎಂದು ಇತ್ತೀಚೆಗೆ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿ, ಪಕ್ಷಕ್ಕೆ ಮುಜುಗರದ ಸನ್ನಿವೇಶ ಉಂಟುಮಾಡಿದ್ದರು.
ಅಧಿಕ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಮತದಾರರನ್ನು ಹೊಂದಿರುವ ರಾಜ್ಯದಲ್ಲಿ ಆಜಾದ್​​ರಂಥ ನಾಯಕರನ್ನು ಪ್ರಚಾರಕ್ಕೆ ಬಳಸದೆ ಇರಲು ಕಾಂಗ್ರೆಸ್ ಮುಂದಾಗಿದೆ. ಮಾಜಿ ಕ್ರಿಕೆಟಿಗ ಅಜರುದ್ದೀನ್ ಮತ್ತು ಕೇಂದ್ರ ಸಚಿವರಾಗಿದ್ದ ಸಲ್ಮಾನ್ ಖುರ್ಷಿದ್​ ಅವರನ್ನು ಪ್ರಚಾರಕರ ಪಟ್ಟಿಯಲ್ಲಿ ಸೇರಿಸಿ ಆಜಾದ್​​ರ ಕೊರತೆಯನ್ನು ನೀಗಿಸಲು ಪ್ರಯತ್ನಿಸಿದೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

‘ಪ್ರಯಾಣಿಕರೇ ಗಮನಿಸಿ… ಮಾಸ್ಕ್ ಸರಿಯಾಗಿ ಧರಿಸದಿದ್ದಲ್ಲಿ, ವಿಮಾನದಿಂದ ಇಳಿಸಲಾಗುವುದು’!
ರಕ್ತದ ಸ್ಯಾಂಪಲ್ ಕೂಡ ಪಡೆಯದೆ ಕೋವಿಡ್​ ನೆಗೆಟೀವ್ ವರದಿ !
ರೇಪ್ ಮಾಡಿದ ಎಂದಳು, ಆದರೆ ಕೈಯಲ್ಲಿ ಅವನ ಹೆಸರ ಟಾಟೂ ಇತ್ತು !


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
