ಜೈಪುರ:ಮುಂಬರುವ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.
ರಾಜಸ್ಥಾನದ ಕರಣ್ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ (75) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೂತ್ರಪಿಂಡ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರನ್ನು ಏಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ತಲೆನೋವಾಗಿ ಪರಿಣಮಿಸಿದ ನ್ಯೂಜಿಲೆಂಡ್; ತಂಡದಲ್ಲಿ ಬದಲಾವಣೆ ಸಾಧ್ಯತೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್​ ನಾಯಕರೊಬ್ಬರು, ಗುರ್ಮೀತ್​ ಸಿಂಗ್​ ಅವರು ಬಹುಕಾಲದಿಂದ ಅಧಿಕ ರಕ್ತದೊತ್ತಡ ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
ಗುರ್ಮೀತ್​ ಸಿಂಗ್​ ಅವರ ನಿಧನವನ್ನು ಕಾಂಗ್ರೆಸ್​ ಪಕ್ಷದ ಉನ್ನತ ಮೂಲಗಳು ಖಚಿತಪಡಿಸಿದ್ದು, ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 2 =
Remember me
