ನವದೆಹಲಿ:ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಭಾರತದಲ್ಲಿ ಎಂಟು ಕೋಟಿ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ. ಉದ್ಯೋಗದ ವಿಚಾರದಲ್ಲಿ ಪ್ರಧಾನಿ ಮೋದಿ ಸುಳ್ಳಿನ ಜಾಲವನ್ನು ಹೆಣೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿ:ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ; ಕೇಂದ್ರದ ವಿರುದ್ಧ ಮೆಹಬೂಬಾ ಮುಫ್ತಿ ಆರೋಪ
ಪ್ರಧಾನಿ ಮೋದಿ ಜೀ, ಉದ್ಯೋಗ ಸೃಷ್ಟಿಸಿರುವ ಬಗ್ಗೆ ನೀವು ಸುಳ್ಳಿನ ಜಾಲವನ್ನು ಹೆಣೆಯುತ್ತಿದ್ದೀರಿ. ರಾಷ್ಟ್ರೀಯ ನೇಮಕಾತಿ ಏಜೆನ್ಸಿಯನ್ನು (NRA) ಘೋಷಿಸುವಾಗ ನೀವು ಏನು ಹೇಳಿದ್ದೀರಿ. ಆಗಸ್ಟ್‌ 2020ರಲ್ಲಿ ಎನ್‌ಆರ್‌ಎ ಅನೇಕ ಪರೀಕ್ಷೆಗಳನ್ನು ತೆಗೆದುಹಾಕುತ್ತದೆ ಮತ್ತು ಪಾರದರ್ಶಕತೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದೀರಿ.
ಅದಷ್ಟೆ ಅಲ್ಲದೆ ಪ್ರಧಾನಿ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ನಾಲ್ಕು ವರ್ಷಗಳಲ್ಲಿ ಎನ್‌ಆರ್‌ಎ ಒಂದೇ ಒಂದು ಪರೀಕ್ಷೆಯನ್ನು ಏಕೆ ನಡೆಸಿಲ್ಲ? 1,517 ಕೋಟಿ ರೂಪಾಯಿ ನಿಧಿಯಲ್ಲಿ ಕೇವಲ 58 ಕೋಟಿ ರೂಪಾಯಿಯನ್ನು ಮಾತ್ರ ಏಕೆ ಖರ್ಚು ಮಾಡಿದೆ? ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗಾಗಿ ಎನ್‌ಆರ್‌ಎ ಸ್ಥಾಪಿಸಲಾಗಿದೆ. ಉದ್ದೇಶಪೂರ್ವಕವಾಗಿ ಎಸ್​​ಸಿ, ಎಸ್​ಟಿ, ಒಬಿಸಿ, ಇಡಬ್ಲ್ಯುಎಸ್​​ ಸಮುದಾಯಗಳ ಯುವಕರ ಮೀಸಲಾತಿ ಹಕ್ಕುಗಳನ್ನು ಕಸಿದುಕೊಳ್ಳಲು ಅದನ್ನು ನಿಷ್ಕ್ರಿಯಗೊಳಿಸಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯಲ್ಲಿ ಅಕ್ರಮ ನಡೆದಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ವಂಚನೆ ಮಾಡಲಾಗಿದ್ದು, ಎನ್‌ಆರ್‌ಎ ಪರೀಕ್ಷೆಯನ್ನೂ ನಡೆಸಿಲ್ಲ. ಆರ್‌ಎಸ್‌ಎಸ್​​ ಮತ್ತು ಬಿಜೆಪಿ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುವ ಮತ್ತು ಯುವಜನರ ಭವಿಷ್ಯವನ್ನು ಹಾಳು ಮಾಡುವ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಈ ಹಿಂದೆಯೂ ಎನ್‌ಆರ್‌ಎ ಸಮಸ್ಯೆಯನ್ನು ಎತ್ತಿದ್ದೆವು, ಆದರೆ ಮೋದಿ ಸರ್ಕಾರ ಮೌನವಾಗಿತ್ತು ಎಂದು ಆರೋಪಿಸಿದ್ದಾರೆ. (ಏಜೆನ್ಸೀಸ್​​)
ಇಂಡಿಯನ್​ 2 ವೀಕ್ಷಿಸಿ ಕಮಲ್​ ಹಾಸನ್​​​ ನಟನೆಗೆ ನಿರ್ದೇಶಕ ಲೋಕೇಶ್​ ಕನಕರಾಜ್​​ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − two =
Remember me
