ನವದೆಹಲಿ:ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಈಗಾಗಲೇ ಸಿದ್ದತೆಗಳನ್ನು ಆರಂಭಿಸಿವೆ. ಹಾಲಿ ನಡೆಯುತ್ತಿರುವ ಸಂಸತ್​ ಅಧಿವೇಶನದಲ್ಲಿ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಸೀಟು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಆಡಿರುವ ಮಾತಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಭಾಪತಿ ಜಗದೀಪ್​ ಧನಕರ್​, ಪ್ರಧಾನಿ ನರೇಂದ್ರ ಮೋದಿ ಹಾಗೂ ಸದಸ್ಯರು ನಗೆಗಡಲಲ್ಲಿ ತೇಲಿರುವುದನ್ನು ನೋಡಬಹುದಾಗಿದೆ.
PM Modi be like, "I need new haters, the old ones have become my fans…"pic.twitter.com/dnpc5e0vI9
ಇದನ್ನೂ ಓದಿ:ನರೇಂದ್ರ ಮೋದಿ ಜೊತೆ ಹೋದಾಗಲೂ ಪಕ್ಷದ ಶಾಲು ಹಾಕುತ್ತೇನೆ; ಎಚ್​ಡಿಕೆ ವಿರುದ್ಧ ಅಸಮಾಧಾನ ಹೊರಹಾಕಿದ ಎಚ್​ಡಿಡಿ
ಸಂಸತ್ತಿನಲ್ಲಿ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿಯವರತ್ತ ನೋಡಿದ ಖರ್ಗೆ, ನಿಮಗೆ ಬಹುಮತ ಇದೆ. ಈ ಹಿಂದೆ 330-340 ಅವರು ಸ್ಥಾನಗಳನ್ನು ಹೊಂದಿದ್ರಿ. ಈ ಬಾರಿ ಅದು 400 ದಾಟುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಇದನ್ನು ಕೇಳಿ ಬಿಜೆಪಿ ನಾಯಕರು ಜೋರಾಗಿ ಚಪ್ಪಾಳೆ ತಟ್ಟಿದ್ದು, ಸಂಸತ್ ಭವನ ನಗೆಗಡಲಲ್ಲಿ ಮುಳುಗಿತು. ಸ್ವತಃ ಪ್ರಧಾನಿ ಮೋದಿ ಕೂಡ ಜೋರಾಗಿ ನಗುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು, ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ ಎಂಬುದನ್ನು ರಾಜ್ಯಸಭೆಯಲ್ಲಿ ಸ್ವತಃ ಕಾಂಗ್ರೆಸ್‌ ಅಧ್ಯಕ್ಷರೇ ಭವಿಷ್ಯ ನುಡಿದಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದೆ. ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್‌ ಸೌ ಪಾರ್ (ಮೂರನೇ ಬಾರಿ ಮೋದಿ ಸರ್ಕಾರ, ಈ ಬಾರಿ ಬಿಜೆಪಿ ದಾಟಲಿದೆ 400 ಸ್ಥಾನ) ಎಂಬ ಹೊಸ ಘೋಷ ವಾಕ್ಯವನ್ನು ಬಳಸಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − 3 =
Remember me
