ಭೋಪಾಲ್​​:ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಭರ್ಜರಿ ಗೆಲುವಿಗೆ ಐದು ಗ್ಯಾರಂಟಿ ಯೋಜನೆಗಳೇ ಬಹುಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಇದೀಗ ಇದೇ ಯಶಸ್ಸಿನ ಸೂತ್ರವನ್ನು ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲೂ ಅಳವಡಿಸಿಕೊಳ್ಳಲು ಕಾಂಗ್ರೆಸ್​ ಪ್ರಯತ್ನಿಸುತ್ತಿದೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್​ ನಾಯಕರು ಹೇಳುತ್ತಿದ್ದಾರೆ. ಇದರ ನಡುವೆ ಕಾಂಗ್ರೆಸ್​ಗೆ ಕೌಂಟರ್​ ಕೊಡಲು ಬಿಜೆಪಿಯೂ ಕೂಡ ತನ್ನ ತಂತ್ರವನ್ನು ಬದಲಾಯಿಸಿದೆ.
ನಾನಿಂದು ನಿಮಗೆ ಕೆಲವು ಗ್ಯಾರಂಟಿಗಳನ್ನು ನೀಡುತ್ತಿದ್ದೇನೆ ಮತ್ತು ಅವುಗಳನ್ನು ಶೇ. 100 ರಷ್ಟು ಈಡೇರಿಸುತ್ತೇವೆ. ನಾವು ಈಗಾಗಲೇ ಕರ್ನಾಟಕದ ಜನತೆಗೆ ಈ ಭರವಸೆಗಳನ್ನು ನೀಡಿದ್ದೆವು. ಅಲ್ಲಿನ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಭರವಸೆಗಳನ್ನು ಈಡೇರಿಸುತ್ತಿದೆ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಧ್ಯಪ್ರದೇಶದ ಜಬಲ್ಪುರ್​ನಲ್ಲಿ ಜೂನ್​ 12ರಂದು ನಡೆದಿದ್ದ ಸಮಾವೇಶವೊಂದರಲ್ಲಿ ಹೇಳಿದ್ದರು.
ಇದನ್ನೂ ಓದಿ:ದಂಡಬಡ್ಡಿ ವಿಧಿಸುವಂತಿಲ್ಲ: ಬ್ಯಾಂಕ್​ಗಳಿಗೆ ಆರ್​ಬಿಐ ನಿರ್ದೇಶನ; ಜನವರಿಯಿಂದ ಜಾರಿ
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ, ಪ್ರತಿ ತಿಂಗಳು ಮಹಿಳೆಯರಿಗೆ 1,500 ರೂ. ಕೊಡಲಿದ್ದೇವೆ. ಗ್ಯಾಸ್​ ಸಿಲಿಂಡರ್​ 500 ರೂ.ಗೆ ಲಭ್ಯವಾಗಲಿದೆ ಮತ್ತು 100 ಯೂನಿಟ್​ ವಿದ್ಯುತ್​ ಉಚಿತವಾಗಿ ನೀಡುತ್ತೇವೆ. 200 ಯೂನಿಟ್‌ಗಳ ವೆಚ್ಚ ಅರ್ಧದಷ್ಟು ಕಡಿಮೆಯಾಗುತ್ತದೆ. ಮಧ್ಯಪ್ರದೇಶದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಕ್ಕೆ ತರಲಿದ್ದೇವೆ ಮತ್ತು ಬಡ ರೈತರ ಸಾಲ ಹೊರೆಯನ್ನು ಸಂಪೂರ್ಣ ಮನ್ನಾ ಮಾಡಲಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಮಧ್ಯಪ್ರದೇಶ ವಿಚಾರದಲ್ಲಿ ಕಾಂಗ್ರೆಸ್​ ತೆಗೆದುಕೊಂಡ ಮೊದಲ ಹೆಜ್ಜೆ ಏನೆಂದರೆ, ರಣದೀಪ್​ ಸುರ್ಜೇವಾಲ ಅವರನ್ನು ರಾಜ್ಯದ ಉಸ್ತುವಾರಿಯನ್ನಾಗಿ ನೇಮಿಸಿಕೊಳ್ಳುವುದಾಗಿದೆ. ಏಕೆಂದರೆ ಸುರ್ಜೇವಾಲ ಅವರು ಈ ಮುಂಚೆ ಹಾಗೂ ಪ್ರಸ್ತುತ ಕರ್ನಾಟಕದ ಕಾಂಗ್ರೆಸ್​ ಉಸ್ತುವಾರಿಯಾಗಿದ್ದಾರೆ. ಇವರ ಉಪಸ್ಥಿತಿಯಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ.
ಇದಿಷ್ಟೇ ಅಲ್ಲದೆ, ಕರ್ನಾಟಕದಲ್ಲಿ ಕಾಂಗ್ರೆಸ್​ ಗೆಲುವಿನ ಹಿಂದೆ ರಣತಂತ್ರ ರೂಪಿಸಿದ್ದ ಕಾಂಗ್ರೆಸ್ ತಂತ್ರಜ್ಞ ಸುನಿಲ್ ಕನುಗೋಲು ಅವರು ಮಧ್ಯಪ್ರದೇಶದಲ್ಲೂ ಇದೇ ರೀತಿಯ ಫಲಿತಾಂಶಗಳನ್ನು ತರಲು ಜವಬ್ದಾರಿ ವಹಿಸಿದ್ದಾರೆ. ಕರ್ನಾಟಕದಲ್ಲಿ 40 ಪರ್ಸೆಂಟ್​ ಕಮಿಷನ್​ ವಿರುದ್ಧ ಅಭಿಯಾನ ಮಾಡಿದ್ದ ಕಾಂಗ್ರೆಸ್​ ಮಧ್ಯಪ್ರದೇಶದಲ್ಲಿ 10 ಪರ್ಸೆಂಟ್​​ ಸೇರಿಸಿಕೊಂಡು 50 ಪರ್ಸೆಂಟ್​ ಕಮಿಷನ್​ ಆರೋಪ ಮಾಡುತ್ತಿದೆ.
ಕುಂಭಮೇಳದ ಒಳಗೂ ಭ್ರಷ್ಟಾಚಾರ ಇತ್ತು. ಇಲ್ಲಿ ಸಿಂಹಸ್ಥ ಮೇಳವಿದೆ. ಮಹಾಕಾಲ್ ದೇವಸ್ಥಾನ ನಿರ್ಮಾಣದಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್​ ನಾಯಕ ದಿಗ್ವಿಜಯ್​ ಸಿಂಗ್​ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಖಡಕ್​ ಉತ್ತರ ನೀಡಿರುವ ಬಿಜೆಪಿ ಮುಖ್ಯಸ್ಥ ವಿಡಿ ಶರ್ಮಾ, ಕಾಂಗ್ರೆಸ್​ ಜನರನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸುತ್ತಿದೆ. ಇದಕ್ಕೆ ಬಿಜೆಪಿ ಸರಿಯಾಗಿ ತಿರುಗೇಟು ನೀಡಲಿದೆ ಎಂದಿದ್ದಾರೆ.
ಕಾಂಗ್ರೆಸ್​ನವರು ನಕಲಿ ಪತ್ರದ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದೆ. ಇದಕ್ಕೆ ಬಲವಾದ ಪ್ರತ್ಯುತ್ತರನ್ನು ನೀಡಲಾಗುವುದು. ನಮ್ಮ ಪಕ್ಷದ ಪ್ರತಿಯೊಬ್ಬರು ಪ್ರಿಯಾಂಕಾ ಗಾಂಧಿಗೆ ಉತ್ತರ ನೀಡಲಿದ್ದಾರೆ. ನೀವೂ ಉತ್ತರಿಸಬೇಕಾಗುತ್ತದೆ. ನೀವು ಮಾನನಷ್ಟ ಅಪರಾಧ ಎಸಗಿದ್ದೀರಿ ಎಂದು ವಿಡಿ ಶರ್ಮಾ ಕಾಂಗ್ರೆಸ್​ ವಿರುದ್ಧ ಕಿಡಿಕಾಡಿದ್ದಾರೆ.
ಈಗಾಗಲೇ ಮಧ್ಯಪ್ರದೇಶದಲ್ಲಿ 39 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ನಮ್ಮ ಸಿದ್ಧತೆಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ. ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಹೆದರುತ್ತಿದೆ. ನಾವು ನಮ್ಮ ಅಭ್ಯರ್ಥಿಗಳನ್ನು ಹೆಸರಿಸಿದ್ದೇವೆ. ನಮ್ಮ ಜನರಲ್‌ಗಳು ಈಗ ಕ್ಷೇತ್ರದಲ್ಲಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಇದನ್ನೂ ಓದಿ:ರಾಜ್ಯದ ರೈತರಿಗೆ ಅನುಕೂಲಕರ: ಬೆಂಬಲ ಬೆಲೆಯಲ್ಲಿ ಹೆಚ್ಚಿನ ರಾಗಿ, ಜೋಳ ಖರೀದಿ
ಇದರ ನಡುವೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿಭಾಗೀಯ ಮಟ್ಟದಲ್ಲಿ ಸಭೆ ನಡೆಸುತ್ತಿದೆ. ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಬಿಹಾರದಿಂದ ಸುಮಾರು 230 ಶಾಸಕರು ಏಳು ದಿನಗಳ ಕಾಲ ರಾಜ್ಯದಾದ್ಯಂತ ಜನರನ್ನು ಭೇಟಿಯಾಗಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಪ್ರಚಾರವನ್ನು ತೀವ್ರಗೊಳಿಸಲು ನೋಡುತ್ತಿರುವಾಗ ಅಮಿತ್​ ಶಾ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇನ್ನು ಮಧ್ಯಪ್ರದೇಶದ ಚುನಾವಣೆಗೆ ಇನ್ನು ದಿನಾಂಕ ನಿಗದಿಯಾಗಿಲ್ಲ. ಆದರೆ, ನವೆಂಬರ್​ ಒಳಗೆ ಚುನಾವಣೆ ನಡೆಯುವ ಸಾದ್ಯತೆ ಇದೆ. ಒಟ್ಟು 230 ವಿಧಾನಸಭಾ ಸ್ಥಾನಗಳನ್ನು ಮಧ್ಯಪ್ರದೇಶ ಹೊಂದಿದೆ. ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದೆ.(ಏಜೆನ್ಸೀಸ್​)
ಇತ್ತೀಚೆಗೆ ಟ್ರೆಂಡ್​ ಆಗಿರುವ ಬಿಯರ್​ ಟ್ಯಾನಿಂಗ್​ ಅಂದ್ರೇನು? ಇದು ಎಷ್ಟು ಡೇಂಜರ್? ಇಲ್ಲಿದೆ ಮಾಹಿತಿ…

ಇಂದಿನಿಂದ ವಿಶ್ವ ಅಥ್ಲೆಟಿಕ್ಸ್​; ಸ್ವರ್ಣ ಪದಕದ ಮೇಲೆ ನೀರಜ್​ ಚೋಪ್ರಾ ಕಣ್ಣು

ಹಳ್ಳಿ ಬೆಳಗಿದರೆ ದೇಶಕ್ಕೆ ಬೆಳಕು: ಚುನಾವಣೆ ಗೆಲುವಿನ ಉದ್ದೇಶವಿಲ್ಲ; ದೇಶದ ಅಭಿವೃದ್ಧಿಗಾಗಿ ಕೆಲಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
