ನವದೆಹಲಿ:ಕಾಂಗ್ರೆಸ್ ನೂತನ ಅಧ್ಯಕ್ಷರ ನೇಮಕದ ಬಗ್ಗೆ ಪತ್ರ ಬರೆದಿದ್ದ ಬಂಡಾಯ ನಾಯಕರೊಂದಿಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಶನಿವಾರ ಸಭೆ ನಡೆಸಿದ ಬೆನ್ನಲ್ಲೇ, ತೆಲಂಗಾಣ, ಗುಜರಾತ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿನ ನಾಯಕತ್ವ ಬದಲಾವಣೆಗೆ ಪಕ್ಷ ಮುಂದಾಗಿದೆ.
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಯಲ್ಲಿನ ಕಳಪೆ ನಿರ್ವಹಣೆಯ ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಗುಜರಾತ್ ಉಪಚುನಾವಣೆ ಹೀನಾಯ ಸೋಲಿನಿಂದಾಗಿ ಅಲ್ಲಿನ ಅಧ್ಯಕ್ಷ ಅಮಿತ್ ಚಾವ್ಡಾ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರವೂ ಸೇರಿ ನಾಲ್ಕು ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಮುಂದಾಗಿದೆ. ಮುಂದಿನ ವರ್ಷಾರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಅಸ್ಸಾಂ ಮತ್ತು ಕೇರಳಕ್ಕೆ ತಲಾ ಮೂವರು ಎಐಸಿಸಿ ಕಾರ್ಯದರ್ಶಿಗಳನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ. ಅಸ್ಸಾಂಗೆ ಜಿತೇಂದ್ರ ಸಿಂಗ್ ಮತ್ತು ಕೇರಳಕ್ಕೆ ತಾರಿಕ್ ಅನ್ವರ್ ನೇಮಕವಾಗಿದ್ದು, ಇವರು ಆಯಾ ರಾಜ್ಯಗಳ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳ ಜತೆಗೆ ಪಕ್ಷದ ಸಂಘಟನೆಗೆ ಕೆಲಸ ಮಾಡಲಿದ್ದಾರೆ. ಮುಂದಿನ 10 ದಿನಗಳಲ್ಲಿ ಸರಣಿ ಸಭೆ ನಡೆಯಲಿದೆ. ಇದು ಬಂಡಾಯ ನಾಯಕರಲ್ಲಿ ಸಾಮರಸ್ಯ ಮೂಡಿಸುವ ಮೊದಲ ಹೆಜ್ಜೆಯಾಗಿದೆ ಎನ್ನಲಾಗಿದೆ.
ಸಾಂಸ್ಥಿಕ ಚುನಾವಣೆಗಳನ್ನು ನಡೆಸಲು ಪಕ್ಷದ ಉನ್ನತ ನಾಯಕತ್ವ ಒಪ್ಪಿಗೆ ನೀಡುತ್ತಿದ್ದು, ರಾಹುಲ್ ಗಾಂಧಿ ಕೂಡ ಪಕ್ಷ ಮತ್ತು ಹಿರಿಯ ಮುಖಂಡರು ಬಯಸಿದರೆ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಹೊರಲು ತಾನು ಸಿದ್ಧ ಎಂದು ಸಭೆಯಲ್ಲಿ ಹೇಳಿದ್ದಾರೆ. ಹೀಗಾಗಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮರಳುವ ಲಕ್ಷಣಗಳು ಗೋಚರಿಸಿವೆ. ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಿ ಮರಳಬೇಕು ಎಂದು ಕಾಂಗ್ರೆಸ್​ನ ಶೇಕಡ 99 ನಾಯಕರು ಬಯಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದ್ದಾರೆ. ಆದರೆ ಬಂಡಾಯ ನಾಯಕರು ಪಕ್ಷದ ಎಲ್ಲ ಹಂತದ ಸ್ಥಾನಗಳಿಗೆ ಚುನಾವಣೆಗಳು ನಡೆಯಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಓ ಪುರುಷರೇ.. ನಿಮಗಿದು ಬ್ಯಾಡ್ ನ್ಯೂಸ್​!; ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ಕರೊನಾ ಸೋಂಕಿತರಾಗದಂತೆ ಎಚ್ಚರ ವಹಿಸಿ

ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
