ನವದೆಹಲಿ:ರಾಜಸ್ಥಾನದಲ್ಲಿ ಅಶೋಕ್​ ಗೆಹ್ಲೋಟ್​ ನೇತೃತ್ವದ ಕಾಂಗ್ರೆಸ್​ ಸರ್ಕಾರವನ್ನು ಉರುಳಿಸಲು ಹುನ್ನಾರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಶೇಖಾವತ್​ ವಿರುದ್ಧ ಕಾಂಗ್ರೆಸ್​ ಆರೋಪಿಸಿದೆ. ಈ ತಪ್ಪಿಗಾಗಿ ಅವರ ವಿರುದ್ಧ ಎಫ್​ಐಆರ್​ ದಾಖಲಿಸಬೇಕು ಎಂದು ಆಗ್ರಹಿಸಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್​ ವಕ್ತಾರ ರಣದೀಪ್​ ಸಿಂಗ್​ ಸುರ್ಜೇವಾಲಾ ಈ ಆರೋಪ ಮಾಡಿದ್ದು, ಶೇಖಾವತ್​ ವಿರುದ್ಧ ಎಫ್​ಐಆರ್​ ದಾಖಲಿಸಲು ಆಗ್ರಹಿಸಿದರು. ಜತೆಗೆ ಗೆಹ್ಲೋಟ್​ ಸರ್ಕಾರವನ್ನು ಉರುಳಿಸಲು ಹುನ್ನಾರ ನಡೆಸಿ, ಶೇಖಾವತ್​ ಕೆಲ ಕಾಂಗ್ರೆಸ್​ ಶಾಸಕರೊಂದಿಗೆ ನಡೆಸಿದ್ದಾರೆ ಎನ್ನಲಾದ ದೂರವಾಣಿ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಿದರು.
ಇದನ್ನೂ ಓದಿ:13,960 ಕೋಟಿ ರೂ. ಸಾಲ ತೀರುವಳಿ ಪ್ಯಾಕೇಜ್​, ಕಿಂಗ್​ ಆಫ್​ ಗುಡ್​ ಟೈಮ್ಸ್​ನ ಮತ್ತೊಂದು ದಾಳ
ಗೆಹ್ಲೋಟ್​ ಸರ್ಕಾರವನ್ನು ಉರುಳಿಸಲು ಶೇಖಾವತ್​ ಅವರು ಕಾಂಗ್ರೆಸ್​ ಶಾಸಕ ಭನ್ವರ್​ಲಾಲ್​ ಶರ್ಮ ಅವರ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ಇದರ ರೆಕಾರ್ಡಿಂಗ್​ ತಮ್ಮ ಬಳಿ ಇರುವುದಾಗಿಯೂ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಜತೆಗೆ ಸಂಚುಕೋರ ಶಾಸಕ ಭನ್ವರ್​ಲಾಲ್​ ಶರ್ಮ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಪಕ್ಷದ ಹೈಕಮಾಂಡ್​ಗೆ ಮನವಿ ಮಾಡಿಕೊಂಡರು.
ಈ ಹುನ್ನಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮಾಜಿ ಸಚಿವ ಹಾಗೂ ಕಾಂಗ್ರಸ್​ ಶಾಸಕ ವಿಶ್ವೇಂದ್ರ ಸಿಂಗ್​ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿರುವುದಾಗಿ ಹೇಳಿದರು.
ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ ಡ್ರೋನ್ ಪ್ರತಾಪ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
