ನವದೆಹಲಿ:ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಡಿಎಂಕೆ ನಾಯಕ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆ ಇದೀಗ ಕಾಂಗ್ರೆಸ್​ ಮೈತ್ರಿಕೂಟದಲ್ಲೇ ಭಿನ್ನಾಭಿಪ್ರಾಯ ಮೂಡಿಸಿರುವ ಲಕ್ಷಣಗಳು ಗೋಚರಿಸಿವೆ.
ಎನ್​ಡಿಎಗೆ ವಿರುದ್ಧವಾಗಿ ಕಾಂಗ್ರೆಸ್​ ನೇತೃತ್ವದ ವಿರೋಧ ಪಕ್ಷಗಳು ಒಂದಾಗಿ ರಚಿಸಿಕೊಂಡಿರುವ ‘ಇಂಡಿಯಾ’ದ ಪ್ರಮುಖ ಅಂಗಪಕ್ಷವಾಗಿರುವ ಡಿಎಂಕೆ ನಾಯಕನಿಂದ ಇಂಥದ್ದೊಂದು ಹೇಳಿಕೆ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್, ಎಲ್ಲ ಧರ್ಮಗಳನ್ನೂ ಗೌರವಿಸುವ ಅಗತ್ಯವಿದೆ. ತಮ್ಮ ನಿಲುವುಗಳನ್ನು ವ್ಯಕ್ತಪಡಿಸುವ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದರೂ ಇನ್ನೊಬ್ಬರ ನಂಬಿಕೆಗಳನ್ನು ಗೌರವಿಸಬೇಕು ಎಂದಿದ್ದಾರೆ.
ಇದನ್ನೂ ಓದಿ:ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…
ಮತ್ತೊಂದೆಡೆ ಮಧ್ಯಪ್ರದೇಶದ ಮಾಜಿ ಸಿಎಂ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್​ ನಾಥ್​ ಸುದ್ದಿಗಾರರಿಗೆ ಪ್ರತಿಕ್ರಿಯಿಸುತ್ತ, ಸ್ಟಾಲಿನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ. ಇನ್ನೊಬ್ಬ ಕಾಂಗ್ರೆಸ್ ನಾಯಕ ಡಾ. ಕರಣ್ ಸಿಂಗ್ ಈ ಕುರಿತು ಲಿಖಿತ ಅಭಿಪ್ರಾಯ ಪ್ರಕಟಿಸಿದ್ದು, ಈ ಹೇಳಿಕೆ ಅತ್ಯಂತ ದುರದೃಷ್ಟಕರವಾದುದು, ಇದು ಸ್ವೀಕಾರಾರ್ಹವಲ್ಲ ಎಂದಿದ್ದಾರೆ.
ಕಾಂಗ್ರೆಸ್​ನ ಇನ್ನು ಕೆಲವು ನಾಯಕರು ಉದಯನಿಧಿ ಹೇಳಿಕೆ ಪರವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಉದಯನಿಧಿಯ ‘ಸನಾತನ’ ಹೇಳಿಕೆ ಕಾಂಗ್ರೆಸ್​ನಲ್ಲೇ ಭಿನ್ನಾಭಿಪ್ರಾಯ ಸೃಷ್ಟಿಯಾಗುವಂತೆ ಮಾಡಿರುವುದು ಕಂಡುಬಂದಿದೆ.
ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!

ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − sixteen =
Remember me
