ನವದೆಹಲಿ:ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಮತಗಳ ಮೇಲೆ ಕಣ್ಣಿಟ್ಟು ‘ಲಡ್ಕೀ ಹೂ ಲಡ್ ಸಕ್ತೀ ಹೂ’ ಎಂಬ ಅಭಿಯಾನದ ಮೂಲದ ಜನಮನಗಳಿಸಲು ಯತ್ನಿಸಿರುವ ಕಾಂಗ್ರೆಸ್, ರಾಜ್ಯದ ಉನ್ನಾವ್​ನಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಹೆಣ್ಣುಮಗಳ ತಾಯಿ ಆಶಾ ಸಿಂಗ್​ಗೆ ವಿಧಾನಸಭೆ ಟಿಕೆಟ್ ಘೊಷಿಸಿದೆ. ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಈ ತೀರ್ಮಾನ ಪ್ರಕಟಿಸಿದ್ದಾರೆ.
ಆಶಾ ಸಿಂಗ್ ಉನ್ನಾವ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 2017ರಲ್ಲಿ ಆಶಾ ಸಿಂಗ್ ಪುತ್ರಿ ಅತ್ಯಾಚಾರ ಎಸಗಲಾಗಿತ್ತು. ಕೆಲ ದಿನಗಳ ನಂತರ ಸಂತ್ರಸ್ತ ಯುವತಿಯ ತಂದೆಯನ್ನು ಹತ್ಯೆ ಮಾಡಲಾಗಿತ್ತು. ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕ್ಷೇತ್ರದ ಬಿಜೆಪಿ ಶಾಸಕ ಕುಲ್ದೀಪ್ ಸೆಂಗಾರ್​ಗೆ ನ್ಯಾಯಾಲಯ 10 ವರ್ಷಗಳ ಜೀವಾವಧಿ ಶಿಕ್ಷೆ ಘೊಷಿಸಿದೆ. ಬಿಜೆಪಿಯಿಂದ ಆತನನ್ನು ಉಚ್ಛಾಟಿಸಲಾಗಿದೆ. ಮೊದಲ ಹಂತದಲ್ಲಿ ಒಟ್ಟು 104 ಸೀಟುಗಳಿಗೆ ಪ್ರಿಯಾಂಕಾ ಗಾಂಧಿ ಅಭ್ಯರ್ಥಿ ಘೊಷಿಸಿದ್ದಾರೆ. ಇವರಲ್ಲಿ ಶೇ.40ರಷ್ಟು ಮಹಿಳೆಯರಿದ್ದರೆ, ಶೇ.40ರಷ್ಟು ಯುವಕರಿಗೆ ಆದ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಹೊಸ ಮಾದರಿಯ ರಾಜಕಾರಣಕ್ಕೆ ನಾವು ನಾಂದಿ ಹಾಡಲಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಪ್ರಿಯಾಂಕಾ ತಿಳಿಸಿದ್ದಾರೆ.
ಪಂಜಾಬ್​ನಲ್ಲಿ ಸಿಧು, ಚನ್ನಿ ಕಸರತ್ತು:ಚುನಾವಣೆಗೆ ಮುನ್ನವೇ ದೆಹಲಿ ಹೈಕಮಾಂಡ್ ಸಿಎಂ ಅಭ್ಯರ್ಥಿ ಘೊಷಿಸಬೇಕು ಎಂದು ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್ ಚನ್ನಿ ಆಗ್ರಹ ಮಾಡಿದ್ದಾರೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು, ತಮ್ಮನ್ನು ಸಿಎಂ ಅಭ್ಯರ್ಥಿ ಎಂದು ಘೊಷಿಸಬೇಕೆಂದು ಒತ್ತಡ ಹೇರುತ್ತಿದ್ದು, ಇಬ್ಬರ ನಡುವಿನ ಮುಸುಕಿನ ಗುದ್ದಾಟ ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎಂದು ಪಕ್ಷದ ಇತರೆ ಮುಖಂಡರು, ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ನಾಯಕತ್ವದ ಬಗ್ಗೆ ಸ್ಪಷ್ಟತೆ ಇಲ್ಲದಿದ್ದಲ್ಲಿ, ಆಮ್ ಆದ್ಮಿ ಪಕ್ಷ ಪರಿಸ್ಥಿತಿಯ ಲಾಭ ಪಡೆದುಕೊಳ್ಳಬಹುದು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಗುರುವಾರ ಅಂತಿಮ ಗೊಳ್ಳಲಿದ್ದು, 172 ಕ್ಷೇತ್ರಗಳ ಟಿಕೆಟ್ ಘೊಷಣೆಯಾಗಲಿದೆ. ಪಕ್ಷದ ಸಂಸದೀಯ ಪಕ್ಷದ ಸಭೆಯಲ್ಲಿ ಟಿಕೆಟ್ ಅಂತಿಮಗೊಳ್ಳಲಿದೆ. ಇವುಗಳಲ್ಲಿ ಬಹುಪಾಲು ಕ್ಷೇತ್ರಗಳು ಮೊದಲ ಹಂತದಲ್ಲಿ ಚುನಾವಣೆ ಎದುರಿಸುತ್ತಿವೆ. ಸಿಎಂ ಯೋಗಿ ಆದಿತ್ಯನಾಥ, ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಚುನಾವಣೆ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗಿದೆ. ಸಿಎಂ ಯೋಗಿ ಅಯೋಧ್ಯೆಯಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ಹಿಂದು ಮತಗಳ ಕ್ರೋಡಿಕರಣಕ್ಕಾಗಿಯೇ ಯೋಗಿ ಇಲ್ಲಿ ಸ್ಪರ್ಧಿಸಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅಯೋಧ್ಯೆ ಕ್ಷೇತ್ರಕ್ಕೆ ಫೆ.27ರಂದು ಚುನಾವಣೆ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
ಸಿಎಂ ಅಭ್ಯರ್ಥಿ ಜನರಿಂದಲೇ ತೀರ್ಮಾನ:ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಜನರೇ ತೀರ್ವನಿಸುತ್ತಾರೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ತಿಳಿಸಿದ್ದು, 7074870748 ನಂಬರ್​ಗೆ ಕರೆ, ಮೆಸೇಜ್ ಅಥವಾ ವಾಟ್ಸ್​ಅಪ್ ಮೂಲಕ ಅಭಿಪ್ರಾಯ ಹಂಚಿಕೊಳ್ಳಬಹುದು ಎಂದಿದ್ದಾರೆ. ಪಕ್ಷದ ಮುಖಂಡ ಭಗವಂತ್ ಸಿಂಗ್ ಮಾನ್ ಸಿಎಂ ಅಭ್ಯರ್ಥಿಯಾಗಬೇಕು ಎನ್ನುವುದು ನನ್ನ ವೈಯಕ್ತಿಕ ಅನಿಸಿಕೆ. ಆದರೆ, ಮಾನ್ ಅವರೇ ಜನರು ನಿರ್ಧಾರ ಮಾಡಲಿ ಎಂದಿದ್ದಾರೆ. ಹೀಗಾಗಿ, ಜನರಿಗೇ ಆಯ್ಕೆ ಮಾಡುವ ಅವಕಾಶ ನೀಡುತ್ತಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಈ ನಡುವೆ, ಮಾನ್ ಹೆಸರನ್ನು ಅಂತಿಮಗೊಳಿಸುವ ಬದಲು ಸಾರ್ವಜನಿಕ ಅಭಿಪ್ರಾಯ ಕೇಳುವ ತೀರ್ಮಾನ ಮಾನ್ ಬೆಂಬಲಿಗರಿಗೆ ಸಮಾಧಾನ ತಂದಿಲ್ಲ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 1 =
Remember me
