ಮಧ್ಯಪ್ರದೇಶ:ಬುಧವಾರ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮುಂಬರುವ ಚುನುವಾಣಾ ಓಟದಲ್ಲಿ ‘ಕೈ’ ಪಕ್ಷವಿಲ್ಲ, ಕೇವಲ ಸಾರ್ವಜನಿಕರ ಆಕ್ರೋಶಕ್ಕೆ ಮಾತ್ರ ಗುರಿಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ನೀಡುತ್ತಿರುವ ಹಣ ಕಟ್ಟ ಕಡೆಯ ವ್ಯಕ್ತಿಗೂ ತಲುಪಲಿ/ ಕೆ.ಹೆಚ್.ಮುನಿಯಪ್ಪ
ಚುನಾವಣೆಗೂ ಮುನ್ನ ಮತದಾರರನ್ನು ಸೆಳೆಯಲು ಆಡಳಿತಾರೂಢ ಬಿಜೆಪಿ ಸೆಪ್ಟೆಂಬರ್ 3 ರಿಂದ ‘ಜನ ಆಶೀರ್ವಾದ ಯಾತ್ರೆ’ಗೆ ಚಾಲನೆ ನೀಡಿತು. ಇದನ್ನು ವಿರೋಧಿಸಿದ ಕಾಂಗ್ರೆಸ್, ಮಂಗಳವಾರ ಬಿಜೆಪಿ ವಿರುದ್ಧ ‘ಜನ ಆಕ್ರೋಶ ಯಾತ್ರೆ’ ಆರಂಭಿಸಿದೆ.
ಇದನ್ನು ಗಮನದಲಿಟ್ಟುಕೊಂಡು ಇಂದೋರ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಚೌಹಾಣ್, “ಕಾಂಗ್ರೆಸ್ ಮುಂಬರುವ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಎಲ್ಲಿಯೂ ಇಲ್ಲ. ಕೇವಲ ಸಾರ್ವಜನಿಕ ಕೆಂಗಣ್ಣಿಗೆ ಮಾತ್ರ ಗುರಿಯಾಗಿದೆ. ಕಾಂಗ್ರೆಸ್ಸಿಗರ ಏಕೈಕ ಉದ್ದೇಶವೆಂದರೆ ಮತಗಳನ್ನು ಗಳಿಸುವುದು, ಆದ್ರೆ ನಾವು ಸಾರ್ವಜನಿಕ ಸೇವೆ ಮಾಡುತ್ತೇವೆ” ಎಂದು ಹೇಳಿದರು.
ಇದನ್ನೂ ಓದಿ:ದುಡ್ಡೊಂದಿದ್ದರೆ ಸಾಕು ಪೊಲೀಸ್ ಸಿಬ್ಬಂದಿ, ಪೊಲೀಸ್ ಸ್ಟೇಶನ್, ಪೊಲೀಸ್ ನಾಯಿಯನ್ನು ಬಾಡಿಗೆಗೆ ನೇಮಿಸಿಕೊಳ್ಳಬಹುದು!
“ಕಾಂಗ್ರೆಸ್‌ನ ನಿಜವಾದ ಮುಖ ಜನರಿಗೆ ತಿಳಿದಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 230 ಸ್ಥಾನಗಳಲ್ಲಿ ಬಿಜೆಪಿ ದಾಖಲೆಯ ಮತಗಳಿಂದ ಗೆಲುವು ಸಾಧಿಸಲಿದೆ” ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಸೆ.28ಕ್ಕೆ ‘ಕುಮಾರಿ ಶ್ರೀಮತಿ’ ರಿಲೀಸ್​; ಕನ್ನಡದಲ್ಲಿ ಯಾಕಿಲ್ಲ ಎಂದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 14 =
Remember me
