ನವದೆಹಲಿ:ಮುಂಬರುವ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಕಾಂಗ್ರೆಸ್​ ಪಕ್ಷದ ಪ್ರಣಾಳಿಕೆ ಹೇಗಿರಬೇಕು ಎಂಬುದರ ಕುರಿತು ಸಾರ್ವಜನಿಕರ ಸಲಹೆಗಳನ್ನು ಪಡೆಯಲು ಕಾಂಗ್ರೆಸ್ ಆನ್​ಲೈನ್​ ಮೊರೆ ಹೋಗಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ: ಪ್ರಣಾಳಿಕೆ ರಚನೆಗೆ ಜನರ ಮೊರೆಹೋದ ಕಾಂಗ್ರೆಸ್​
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಪಿ.ಚಿದಂಬರಂ, ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಲು ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲಿದೆ. ಕಾಂಗ್ರೆಸ್​ ಪಕ್ಷದ ಪ್ರಣಾಳಿಕೆಯು ಜನರ ಪ್ರಣಾಳಿಕೆಯಾಗಿರಲಿದೆ ಎಂದು ತಿಳಿಸಿದರು.
ಪ್ರತಿ ರಾಜ್ಯದಲ್ಲೂ ಕನಿಷ್ಠ ಒಂದು ಸಮಾಲೋಚನಾ ಸಭೆ ನಡೆಸಲಾಗುವುದು. ಕೆಲವೊಂದು ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಸಮಾವೇಶ ನಡೆಸುವ ಉದ್ದೇಶವಿದೆ ಎಂದರು.
ಪ್ರಣಾಳಿಕೆಯ ಸಿದ್ಧತೆಯಲ್ಲಿ ಭಾರತದ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಹಲವು ವಿಭಾಗದ ಜನರು ಪಕ್ಷಕ್ಕೆ ಸೂಕ್ತ ಸಲಹೆ ನೀಡುವ ಭರವಸೆ ಇದೆ. ಈ ಪ್ರಣಾಳಿಕೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್​ ಪ್ರಣಾಳಿಕೆ ಸಮಾವೇಶದಲ್ಲಿ ಇಂಡಿಯಾ ಮೈತ್ರಿಕೂಟ ಸದಸ್ಯ ಪಕ್ಷಗಳು ಪಾಲ್ಗೊಳ್ಳಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾವೇಶದಲ್ಲಿ ಯಾರು ಬೇಕಾದರೂ ಪಾಲ್ಗೊಳ್ಳಬಹುದು. ಆದರೆ ಪ್ರಣಾಳಿಕೆ ಸಿದ್ಧತೆಯಲ್ಲಿ ಯಾರು ಪಾಲ್ಗೊಳ್ಳಬಹುದು ಎಂಬುದನ್ನು ಪಕ್ಷದ ಮುಖ್ಯಸ್ಥರೇ ನಿರ್ಧರಿಸುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಪಕ್ಷವು ಅಂತರ್ಜಾಲ ತಾಣ awaazbharatki.in ಮತ್ತು ಇ–ಮೇಲ್ ವಿಳಾಸವನ್ನು[email protected]ಬುಧವಾರ ತೆರೆದಿದೆ.
ವಿಶ್ವ ಚೆಸ್​ ಚಾಂಪಿಯನ್ ಡಿಂಗ್ ಲಿರೇನ್ ಮಣಿಸಿ ನಂ.1 ಸ್ಥಾನಕ್ಕೇರಿದ ‘ಪ್ರಜ್ಞಾನಂದ’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 − fifteen =
Remember me
