ಹರಿಯಾಣ:ಸಂಸತ್​ನಲ್ಲಿ ಒಪ್ಪಿಗೆ ಪಡೆದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳು ಇಲ್ಲ ಎನ್ನುವಂತಿಲ್ಲ ಎಂದು ಹಿರಿಯ ಕಾಂಗ್ರೆಸ್​ ಮುಖಂಡ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್​ ಸಿಂಗ್​ ಹೂಡ ಅಭಿಪ್ರಾಯಪಟ್ಟಿದ್ದಾರೆ.
ಸಂಸತ್​ನಲ್ಲಿ ಪಾಸ್​ ಆಗಿರುವ ಮಸೂದೆಯನ್ನು ರಾಷ್ಟ್ರಪತಿ ಅವರೂ ಅನುಮೋದನೆ ನೀಡಿದ್ದಾರೆ. ಇಂತಹ ಕಾಯ್ದೆಯನ್ನು ಸಂವಿಧಾನಿಕ ದೃಷ್ಟಿ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಇಂತಹ ಕಾಯ್ದೆಯನ್ನು ಜಾರಿಗೊಳಿಸುವ ಬಗ್ಗೆ ರಾಜ್ಯಗಳು ಇಲ್ಲ ಎನ್ನುವಂತಿಲ್ಲ, ಆದರೆ ಈ ಕಾಯ್ದೆ ಬಗ್ಗೆ ಕಾನೂನಾತ್ಮಕವಾಗಿ ಪರೀಕ್ಷಿಸುವ ಅಗತ್ಯವಿದೆ ಎಂದಿದ್ದಾರೆ.
ನಿನ್ನೆ (ಭಾನುವಾರ- ಜ.19)ರಂದು ಕೇರಳ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್​ ಹಿರಿಯ ಮುಖಂಡ ಕಪಿಲ್​ ಸಿಬಲ್​ ಕಪಿಲ್​ ಸಿಬಲ್​ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಸಾಂವಿಧಾನಿಕವಾಗಿ ರಾಜ್ಯಗಳು ಸಂಸತ್​ನಿಂದ ಹೊರಬಂದ ಕಾಯ್ದೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಹೇಳುವಂತಿಲ್ಲ ಎಂದಿದ್ದರು. ಪಾರ್ಲಿಮೆಂಟ್​ನಲ್ಲಿ ಒಪ್ಪಿಗೆ ಪಡೆದ ಕಾಯ್ದೆಗಳನ್ನು ರಾಜ್ಯಗಳು ಜಾರಿ ತರಲಾಗುವುದಿಲ್ಲ ಎಂದು ಹೇಳುವಂತಿಲ್ಲ ಎಂದು ಅಭಿಪ್ರಾಯಪಟ್ಟು ಈ ಬಗ್ಗೆ ಟ್ವೀಟ್​ ಕೂಡ ಮಾಡಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − six =
Remember me
