ವಯನಾಡ್(ಕೇರಳ):ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇರಳದ ವಯನಾಡ್ ನಿಂದನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:ಐ ಫೋನ್​, ಐಪ್ಯಾಡ್, ಮ್ಯಾಕ್‌ಬುಕ್‌ ಬಳಕೆದಾರರೇ ಎಚ್ಚರ: ಹೈ ರಿಸ್ಕ್​ ಎನ್ನುತ್ತಿರುವುದೇಕೆ ಕೇಂದ್ರ ಸರ್ಕಾರ..!
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಭಾರಿ ಜನಸ್ತೋಮ ನೆರೆದಿದ್ದುದು ವಿಶೇಷವಾಗಿತ್ತು.
2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡಿನಲ್ಲಿ 10,92,197 ಮತಗಳ ಪೈಕಿ 7,06,367 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಈ ಕ್ಷೇತ್ರದಲ್ಲಿ ಸಿಪಿಐ ಅಭ್ಯರ್ಥಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.
ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಆಯ್ಕೆ ಬಯಸಿ ಸ್ಪರ್ಧಿಸುತ್ತಿದ್ದಾರೆ.
ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು. ರಾಹುಲ್ ಗಾಂಧಿ ಅವರು 2004, 2009 ಮತ್ತು 2014 ರಲ್ಲಿ ಅಮೇಥಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.
ಈ ಕುರಿತು ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮಾತನಾಡಿ, ರಾಹುಲ್ ಗಾಂಧಿ ಅಂತಿಮವಾಗಿ ವಯನಾಡಿಗೆ ನಾಮಪತ್ರ ಸಲ್ಲಿಸಲು ಬರುತ್ತಿರುವುದು ಒಳ್ಳೆಯದು, ಇವರು ಕ್ಷೇತ್ರದಲ್ಲಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಅರುಣಾಚಲದಲ್ಲಿ ಮಲೆಯಾಳಿ ದಂಪತಿ ಜತೆ ಯುವತಿ ನಿಗೂಢ ಮೃತ್ಯು..ಮಾಟ ಮಂತ್ರಕ್ಕೆ ಬಲಿಯಾದರೇ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 1 =
Remember me
