ಜೈಪುರ:ಮುಸ್ಲಿಂ ಲೀಗ್‌ಗಿಂತ ಮೂರು ವರ್ಷಗಳ ಮುನ್ನ ಪಾಕಿಸ್ತಾನದ ನಿರ್ಣಯವನ್ನು ಅಂಗೀಕರಿಸುವ ವಿಚಾರವನ್ನು ಪ್ರಸ್ತಾಪಿಸಿದ ಮೊದಲ ವಕೀಲ ವೀರ ಸಾವರ್ಕರ್​ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಜೈಪುರ ಸಾಹಿತ್ಯ ಸಮ್ಮೇಳನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಎರಡು ರಾಷ್ಟ್ರಗಳ ಸಿದ್ಧಾಂತ ಸಾವರ್ಕರ್​ ಅವರದ್ದು, ಹಿಂದು ಮಹಾಸಭಾವು ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಗುರುತಿಸಬೇಕು ಎಂದರೆ, ಮುಸ್ಲಿಮರಿಗೆ ಬೇರೆ ರಾಷ್ಟ್ರಬೇಕು ಎಂದಿತ್ತು ಎಂದು ಹೇಳಿದರು.
ಹೀಗಾಗಲೇ ಸಾವರ್ಕರ್​ ಬಗ್ಗೆ ರಾಜಕೀಯದ ಹಲವು ನಾಯಕರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಶಶಿ ತರೂರ್​ ಅವರು ಈ ವಿವಾದಿತ ಹೇಳಿಕೆ ನೀಡಿದ್ದಾರೆ.
ವೀರ ಸಾವರ್ಕರ್​ ಅವರಿಗೆ ಭಾರತ ರತ್ನ ನೀಡಬೇಕು ಎಂದು ಬಿಜೆಪಿ ಮತ್ತು ಶಿವಸೇನೆ ಪ್ರತಿಪಾದಿಸಿವೆ. ಇದಕ್ಕೆ ಕೆಲ ಪಕ್ಷಗಳು ವಿರೋಧಿಸಿವೆ.
ಜನವರಿ 18ರಂದು ಶಿವಸೇನಾ ಮುಖಂಡ ಸಂಜಯ್​ ರಾವತ್​ ಅವರು, ಸಾವರ್ಕರ್​ ಅವರನ್ನು ನಾವು ಗೌರವಿಸುತ್ತೇವೆ. ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕೊಡಲು ವಿರೋಧಿಸುವವರನ್ನು ಅವರಿದ್ದ ಜೈಲಿನಲ್ಲಿ ಎರಡು ದಿನ ಇಡಬೇಕು. ಆಗ ದೇಶಕ್ಕೆ ಸಾವರ್ಕರ್​ ಅವರ ಕೊಡುಗೆ ಏನು ಎಂಬುದು ಅರ್ಥವಾಗುತ್ತದೆ ಎಂದಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
