ಭೋಪಾಲ್:ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಬೇಕೆಂಬ ಹಂಬಲದಲ್ಲಿ ಕಾಂಗ್ರೆಸ್​ ಹೆಣಗಾಡುತ್ತಿದ್ದು, ಈ ನಡುವೆ ಕಾಂಗ್ರೆಸ್​ ನಾಯಕರೊಬ್ಬರು ನೀಡಿರುವ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಮಧ್ಯಪ್ರದೇಶದ ರತ್ಲಾಂನಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕಾಂತಿಲಾಲ್​ ಭುರಿಯಾ ಪಕ್ಷ ಅಧಿಕಾರಕ್ಕೆ ಬಂದರೆ ಇಬ್ಬರು ಪತ್ನಿಯರನ್ನು ಹೊಂದಿರುವ ಪುರುಷರಿಗೆ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.
#WATCH| While addressing a public rally, Congress candidate from Madhya Pradesh's Ratlam, Kantilal Bhuria says, "…After the Congress govt comes to power, what we have written in our constitution, Rs 1 lakh will be credited in the account of every woman, and those who have 2…pic.twitter.com/xzTSXoGzH2
ಇದನ್ನೂ ಓದಿ:ಪಂಜಾಬ್​ ಆಟಗಾರರ ಚಳಿ ಬಿಡಿಸಿದ ಕಿಂಗ್​ ಕೊಹ್ಲಿ; ವಿಡಿಯೋ ವೈರಲ್
ಕೇಂದ್ರದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರ ವತಿಯಿಂದ ಪ್ರತಿಯೊಬ್ಬ ಮಹಿಳೆಯ ಖಾತೆಗೆ 1 ಲಕ್ಷ ರೂಪಾಯಿ ಹಣವನ್ನು ಜಮೆ ಮಾಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಈ ಯೋಜನೆಯಡಿ ಇಬ್ಬರು ಪತ್ನಿ ಇರುವವರಿಗೆ 2 ಲಕ್ಷ ರೂಪಾಯಿ ನೀಡಲಾಗುವುದು ಎಂದು ಕಾಂತಿಲಾಲ್​ ಭುರಿಯಾ ಹೇಳಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಹಿರಿಯ ಕಾಂಗ್ರೆಸ್​ ನಾಯಕ ದಿಗ್ವಿಜಯ್​ ಸಿಂಗ್​ ಉಪಸ್ಥಿತರಿರುವುದನ್ನು ನೋಡಬಹುದಾಗಿದೆ.
ಇತ್ತ ಕಾಂಗ್ರೆಸ್​ ಅಭ್ಯರ್ಥಿಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಹೆಣ್ಣು ಮಕ್ಕಳಿಗೆ ಅಗೌರವ ತೋರುವುದು ಕಾಂಗ್ರೆಸ್​ನವರ ರಕ್ತದಲ್ಲೇ ಇದೆ ಎಂದು ಮ್ತೊಮ್ಮೆ ಸಾಬೀತಾಗಿದೆ. ಈ ಕೂಡಲೇ ಕಾಂಗ್ರೆಸ್​ ನಾಯಕಿಯರಾದ ಸೋನಿಯಾ ಹಾಗೂ ಪ್ರಿಯಾಂಕಾ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − seven =
Remember me
