ಮಹಾರಾಷ್ಟ್ರ:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲುವು ದಾಖಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ವಿಜಯದ ಕಾರಣಕ್ಕೆ, ಮುಂಬೈನ್​ ದೇವಸ್ಥಾನವೊಂದರಲ್ಲಿ ಕಾಂಗ್ರೆಸ್ ನಾಯಕರಾದ ಭಾಯಿ ಜಗತಾಪ್, ಸಂಜಯ್ ನಿರುಪಮ್ ಮತ್ತು ಪಕ್ಷದ ಕಾರ್ಯಕರ್ತರು ‘ಹನುಮಾನ್ ಚಾಲೀಸಾ’ ಪಠಿಸಿದ್ದಾರೆ.
ಇದನ್ನೂ ಓದಿ:ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್​
#WATCH| Congress leaders Bhai Jagtap, Sanjay Nirupam and other party workers recite 'Hanuman Chalisa' at a temple in Mumbai following the party's victory in#KarnatakaPollspic.twitter.com/7t7jYoyzNA— ANI (@ANI)May 14, 2023
#WATCH| Congress leaders Bhai Jagtap, Sanjay Nirupam and other party workers recite 'Hanuman Chalisa' at a temple in Mumbai following the party's victory in#KarnatakaPollspic.twitter.com/7t7jYoyzNA
ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಸ್ಪಷ್ಟ ಬಹುಮತದೊಂದಿಗೆ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ ಬಹುಮತ ಪಡೆದುಕೊಂಡಿದೆ. ಹತ್ತು ವರ್ಷ ಬಳಿಕ ಸ್ಪಷ್ಟ ಬಹುಮತ ಪಡೆದು ರಾಜ್ಯದಲ್ಲಿ ಗದ್ದುಗೆಗೇರಿರುವ ಕಾಂಗ್ರೆಸ್ ಮುಂದಿನ ವಾರ ಹೊಸ ಸರ್ಕಾರ ರಚನೆ ಮಾಡಲಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ.
ಜಿದ್ದಾಜಿದ್ದಿಯ ಹೋರಾಟದ ಕಣವಾಗಿದ್ದ ರಾಜ್ಯದಲ್ಲಿ ಎಲ್ಲ ನಿರೀಕ್ಷೆಗಳನ್ನು ಸುಳ್ಳಾಗಿಸಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯುತ್ತಿದ್ದು, ಹೊಸ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಬುಧವಾರ ಅಥವಾ ಗುರುವಾರ ಅಧಿಕಾರದ ಪ್ರಮಾಣವಚನ ಸ್ವೀಕರಿಸುವ ಎಲ್ಲ ಸಾಧ್ಯತೆಗಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + sixteen =
Remember me
