ಹೈದರಾಬಾದ್:ತೆಲಂಗಾಣದಲ್ಲಿ ನಿನ್ನೆಯಷ್ಟೇ (ನ.30) ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ವಿವಿಧ ಮತಗಟ್ಟೆಗಳ ಸಮೀಕ್ಷೆ ತಿಳಿಸಿವೆ. ಆಡಳಿತಾರೂಢ ಬಿಆರ್​ಎಸ್​ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ ಇದ್ದು, ಕುದುರೆ ವ್ಯಾಪಾರ ಸಂಭವವನ್ನು ತಡೆಗಟ್ಟಲು ಡಿ.3ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತೆಲಂಗಾಣದ ಕಾಂಗ್ರೆಸ್​ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವತ್ತ ಕಾಂಗ್ರೆಸ್​ ಹೈಕಮಾಂಡ್​ ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ.
ತೆಲಂಗಾಣ ಕಾಂಗ್ರೆಸ್​ ಘಟಕದ ಮುಖ್ಯಸ್ಥ ರೇವಂತ್​ ರೆಡ್ಡಿ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯಬಹುದು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಭಾನುವಾರದ ಮತ ಎಣಿಕೆಯ ನಂತರ ಶಾಸಕರನ್ನು ಸ್ಥಳಾಂತರಿಸುವ ಬಗ್ಗೆ ಕಾಂಗ್ರೆಸ್​ ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್‌ಗೆ 70ಕ್ಕಿಂತ ಕಡಿಮೆ ಸೀಟುಗಳು ಬಂದರೆ, ಶಾಸಕರನ್ನು ಬೆಂಗಳೂರು ಅಥವಾ ಬೇರೆಡೆಗೆ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಸ್ತಾಪವಿದೆ. ಬಹುಶಃ ಶಾಸಕರನ್ನು ಹೋಟೆಲ್ ಅಥವಾ ರೆಸಾರ್ಟ್‌ಗೆ ಸ್ಥಳಾಂತರ ಮಾಡಬಹುದು ಎಂದು ಕಾಂಗ್ರೆಸ್​ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
119 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ತೆಲಂಗಾಣದಲ್ಲಿ ಸರ್ಕಾರ ರಚನೆಗೆ 60 ಸ್ಥಾನಗಳು ಬೇಕಿದೆ. ಕೆಲವೇ ಅಂತರದಲ್ಲಿ ಕಾಂಗ್ರೆಸ್​ ಬಹುಮತ ಸಾಧಿಸಲಿದೆ ಎಂದು ಕೆಲವು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಇನ್ನೂ ಕೆಲವು ಸಮೀಕ್ಷೆಗಳು ಕಾಂಗ್ರೆಸ್​ ಸುಲಭವಾಗಿ ಗೆಲ್ಲಲಿದೆ ಎಂದಿವೆ. ಸಮೀಕ್ಷೆಯ ಬೆನ್ನಲ್ಲೇ ಮುಂದಿನ ತಯಾರಿಯಾಗಿ ತನ್ನ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಯಿರುವ ಕ್ಷೇತ್ರಗಳಿಗೆ ಕಾಂಗ್ರೆಸ್​ ಇಬ್ಬರು ಸಂಯೋಜಕರನ್ನು ಕಳುಹಿಸಿದೆ ಎಂದು ವರದಿಯಾಗಿದೆ. ಫಲಿತಾಂಶದ ಬಳಿಕ ಚುನಾವಣಾ ಅಧಿಕಾರಿಗಳಿಂದ ಪ್ರಮಾಣಪತ್ರಗಳನ್ನು ಪಡೆದ ನಂತರ ಶಾಸಕರನ್ನು ಕಾರುಗಳ ಬೆಂಗಾವಲುಪಡೆಯಲ್ಲಿ ಬೆಂಗಳೂರಿಗೆ ಕರೆದು ತರುವ ಮೊದಲು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್​​ ಶಾಸಕರನ್ನು ಸ್ಥಳಾಂತರಿಸಬೇಕಾದರೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ಡಿಕೆಶಿ ಅವರು 2018ರಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್​ ಶಾಸಕರಿಗೆ ಇದೇ ರೀತಿಯ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದರು.(ಏಜೆನ್ಸೀಸ್​)
ಬಿಜೆಪಿ-2 ಕಾಂಗ್ರೆಸ್-2 ಅತಂತ್ರ-1; ಡಿ.03ಕ್ಕೆ ಫಲಿತಾಂಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 7 =
Remember me
