ಛತ್ತೀಸ್‌ಗಢ:ಧರ್ಶಿವಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅನಿತಾ ಶರ್ಮಾ ‘ಹಿಂದು ರಾಷ್ಟ್ರ ನಿರ್ಮಿಸಲು ಒಗ್ಗಟ್ಟಾಗಿ’ ಎಂದು ಕರೆ ನೀಡಿದ್ದ ವಿಡಿಯೋ ತುಣುಕೊಂಡು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದೀಗ ಶಾಸಕಿ ಅನಿತಾ ವರ್ವಾ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಪ್ರತಿಕ್ರಿಯಿಸಿ, ‘ಇದು ಅವರ ವೈಯಕ್ತಿಕ ಅಭಿಪ್ರಾಯ’ ಎಂದು ಹೇಳಿದೆ.
ರಾಯ್‌ಪುರದಲ್ಲಿ ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಶಾಸಕಿ ಹಿಂದು ರಾಷ್ಟ್ರ ನಿರ್ಮಾಣ ಆಗಬೇಕು. ಇದಕ್ಕಾಗಿ ಎಲ್ಲಾ ಹಿಂದುಗಳು ಮುಂದೆ ಬರಬೇಕು ಎಂದು ಮನವಿ ಮಾಡಿಕೊಂಡಿದ್ದರು.
ಇದನ್ನೂ ಓದಿ:ಅಂಗಡಿ ಮುಂದೆ ಕಾಡಾನೆ ಕಲಾಕೃತಿ ನಿರ್ಮಿಸಿದ ವ್ಯಾಪಾರಿ; ಇದಕ್ಕೆ ಕಾರಣ ಅದೊಂದು ನಂಬಿಕೆ!
ಶಾಸಕಿ ಅನಿತಾ ವರ್ಮಾ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ ಎನ್ನಲಾಗಿದೆ. ಹಿಂದು ರಾಷ್ಟ್ರ ನಿರ್ಮಾಣಕ್ಕೆ ದೇಶದ ಜನರು ಒಂದಾಗಬೇಕು ಎಂದಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಶಾಸಕಿಯ ಹೇಳಿಕೆಯನ್ನು ಪ್ರತಿಪಕ್ಷಗಳು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಛತ್ತೀಸ್‌ಗಢ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.
रायपुर धर्म सभा में कांग्रेसी MLA ने किया हिंदू राष्ट्र का समर्थन, धरसिवा विधायक अनीता योगेंद्र शर्मा ने कहा हम हिंदुओं को एक होना है. तब ही हिंदू राष्ट्र बन सकता है.अपने गांव जिस जगह रहते है वहां से हिंदू राष्ट्र बनाने के लिए संकल्पित होना है. ⁦@gyanendrat1⁩pic.twitter.com/fr31BNwY6h
— Ravi Miri ABP News (@Ravimiri1)June 17, 2023
ಕಾಂಗ್ರೆಸ್ ಪಕ್ಷ ಸಂವಿಧಾನದ ಜತೆ ನಿಂತಿದೆ. ಬಾಬಾಸಾಹೇಬ್ ಅಂಬೇಡ್ಕರ್, ಪಂಡಿತ್ ಜವಾಹರ್ ಲಾಲ್ ನೆಹರು ಮತ್ತು ಡಾ. ರಾಜೇಂದ್ರ ಪ್ರಸಾದ್ ಅವರಂತಹ ನಾಯಕರು ರಚಿಸಿದ ಸಂವಿಧಾನದಲ್ಲಿ ಉಲ್ಲೇಖಿಸಲಾದ ಜಾತ್ಯತೀತತೆ ಬಗ್ಗೆ ಕಾಂಗ್ರೆಸ್ ದೃಢವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನದೇ ಆದ ಸಿದ್ಧಾಂತವನ್ನು ಹೊಂದಬಹುದು. ಪಕ್ಷವು ಭಿನ್ನಾಭಿಪ್ರಾಯಗಳನ್ನು ಸ್ವಾಗತಿಸುತ್ತದೆ ಎಂದು ಶುಕ್ಲಾ ಹೇಳಿದ್ದರು.
ಈ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಶಾಸಕಿ ಅನಿತಾ ವರ್ಮಾ ಪ್ರತಿಕ್ರಿಯಿಸಿದ್ದು, ‘ದೇಶದಲ್ಲಿ ವಿವಿಧ ಧರ್ಮಗಳ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ನಾವು ಯಾರನ್ನೂ ಒಡೆಯಲು ಬಯಸುವುದಿಲ್ಲ ಬಯಸುವುದಿಲ್ಲ. ನಮ್ಮ ನಾಯಕ ರಾಹುಲ್ ಗಾಂಧಿ ಜನರನ್ನು ಒಗ್ಗೂಡಿಸಲು ಭಾರತ್ ಜೋಡೋ ಯಾತ್ರೆ ನಡೆಸುತ್ತಾರೆ. ಬಿಜೆಪಿಗೆ ಸೇರಿದ ಕೆಲ ಜನರು ಸಮಾಜದಲ್ಲಿ ಒಡಕು ಮೂಡಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
