ನವದೆಹಲಿ:ಕರೊನಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜೀವ್​ ಅವರು ತುಂಬಾ ಆಪ್ತರಾಗಿದ್ದರು. ಏಪ್ರಿಲ್ 22ರಂದು ಅವರಿಗೆ ಕರೊನಾ ಸೋಂಕು ತಗುಲಿತ್ತು. ಪುಣೆಯ ಜೆಹಾಂಗೀರ್​ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಪ್ರಸ್ತುತ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಈ ಹಿಂದೆ ಮಹಾರಾಷ್ಟ್ರದ ಹಿಂಗೋಲಿಯಿಂದ 16ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಈ ಸಂದರ್ಭದಲ್ಲಿ ಶಿವಸೇನೆ ಸಂಸದ ಸುಭಾಷ್ ವಾಂಖೆಡೆ ಸೋಲಿಸಿದ್ದರು.
ರಾಜೀವ್​ ಅವರು ಗುಜರಾತ್ ರಾಜ್ಯದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಶಾಶ್ವತವಾಗಿ ಆಯ್ಕೆಯಾಗಿದ್ದರು. ಗುಜರಾತ್‌ನ ಉಸ್ತುವಾರಿ ಆಗಿ ನೇಮಕಗೊಳ್ಳುವ ಮೊದಲು ಅವರು ಗುಜರಾತ್ ವಿಧಾನಸಭಾ ಚುನಾವಣೆ (2017) ಸಮಯದಲ್ಲಿ ಸೌರಾಷ್ಟ್ರ ಪ್ರದೇಶದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಯಾಗಿದ್ದರು, ಅಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.
ವಾಟ್ಸ್​ಆ್ಯಪ್​ ಸ್ಟೇಟಸ್​ ನೋಡಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ!

ರೆಮ್​ಡೆಸಿವಿರ್​ ಹೆಸರಲ್ಲಿ ಕರಾಳ ದಂಧೆ! 2500 ರೂ. ಇಂಜೆಕ್ಷನ್​ಗೆ 40000 ರೂ. ವಸೂಲಿ, ನಕಲಿ ಔಷಧವೂ ಮಾರಾಟ

ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 10 =
Remember me
