ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 99 ಸ್ಥಾನಗಳಲ್ಲಿ ಗೆಲುವು ಕಂಡಿರುವ ಕಾಂಗ್ರೆಸ್​ ತನ್ನ ಸಂಖ್ಯಾಬಲವನ್ನು 100ಕ್ಕೆ ಏರಿಸಿಕೊಳ್ಳಲು ಮುಂದಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವಿಶಾಲ್ ಪಾಟೀಲ್ ಮರಳಿ ಪಕ್ಷದತ್ತ ಮುಖ ಮಾಡಿರುವುದೇ ಇದಕ್ಕೆ ಪ್ರಮುಖ ಕಾರಣ.
ಇದನ್ನೂ ಓದಿ:ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ!
ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ವಿಶಾಲ್​ ಪಾಟೀಲ್ ಪಕ್ಷಕ್ಕೆ ತನಗನ ಬೆಂಬಲ ಸೂಚಿಸಿದರು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತದಾದಾ ಪಾಟೀಲ್ ಅವರ ಮೊಮ್ಮಗ ವಿಶಾಲ್ ಪಾಟೀಲ್ ಸಾಂಗ್ಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಜಯ್​ ಕಾಕಾ ಪಾಟೀಲ್ ಅವರನ್ನು ಸೋಲಿಸಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಪಾಲುದಾರರ ನಡುವೆ ಸೀಟು ಹಂಚಿಕೆಯಿಂದಾಗಿ ಈ ಸ್ಥಾನವನ್ನು ಶಿವಸೇನೆ-ಯುಬಿಟಿಗೆ ನಿಯೋಜಿಸಿದ ನಂತರ ವಿಶಾಲ್ ಪಾಟೀಲ್ ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿದ್ದರು.
ವಿಶಾಲ್ ಪಾಟೀಲ್ ಗುರುವಾರ(ಜೂ6)ದಂದು ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಇವರು ಪಕ್ಷಕ್ಕೆ ಬೆಂಬಲ ಸೂಚಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಖರ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಲೋಕಸಭೆಯ ಸೆಕ್ರೆಟರಿಯೇಟ್ ಒಪ್ಪಿಗೆ ನೀಡಿದರೆ, ವಿಶಾಲ್ ಪಾಟೀಲ್ ಅವರನ್ನು ಕಾಂಗ್ರೆಸ್‌ನ ಸಹ ಸಂಸದ ಎಂದು ಕರೆಯಬಹುದು. ಲೋಕಸಭೆಯಲ್ಲಿ ಪಕ್ಷದ ಬಲ 100 ಆಗಲಿದೆ ಎಂದು ಕಾಗ್ರೆಸ್​ ಮುಖಂಡರು ಹೇಳುತ್ತಿದ್ದಾರೆ.
‘ಇದು ಪವನ್ ಅಲ್ಲ ತೂಫಾನು’: ಜನಸೇನಾನಿಗೆ ಪ್ರಧಾನಿ ಮೋದಿ ಶ್ಲಾಘನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 5 =
Remember me
