ಪಾಟ್ನಾ :ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಜಯಗಳಿಸಲಿದೆ. ಹಗಲುಗನಸು ಕಾಣುವುದನ್ನು ಬಿಡದ ಕಾಂಗ್ರೆಸ್​​ ಕಳಪೆ ಸಾಧನೆ ಮಾಡುತ್ತಿದೆ ಎಂದು ಸಂಸದ ರವಿಶಂಕರ್‌ ಪ್ರಸಾದ್‌ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿ ಅವರನ್ನು ಟೀಕಿಸುವುದನ್ನು ಬಿಟ್ಟು ಉತ್ತಮ ಕೆಲಸ ಮಾಡುವಂತೆ ಕಾಂಗ್ರೆಸ್​​ಗೆ ಸಲಹೆ ನೀಡಿದ್ದಾರೆ.
ಇದನ್ನು ಓದಿ :https://www.vijayavani.net/after-exit-polls-pm-modi-to-hold-7-meetings-today
ಎಕ್ಸಿಟ್ ಪೋಲ್ ಕುರಿತು ಮಾತನಾಡಿದ ರವಿಶಂಕರ್​ ಪ್ರಸಾದ್​ ಪ್ರಧಾನಿ ಮೋದಿ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರು ಮತ್ತು ರೈತರ ಬಗ್ಗೆ ಕಾಳಜಿ ಇದೆ. ಅವರು ಈ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಪಾಟ್ನಾ ಸಾಹಿಬ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೂಡ ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್ ಹೇಳಿಕೆಗೆ ವ್ಯಂಗ್ಯವಾಡಿದರು. ಕಾಂಗ್ರೆಸ್‌ನ ಪ್ರಸ್ತುತ ಪರಿಸ್ಥಿತಿಗೆ ಸ್ವಪಕ್ಷದವರೇ ಕಾರಣ. ಜನರು ಹಗಲಿನಲ್ಲಿ ಕನಸು ಕಾಣುತ್ತಾರೆ ಆದರೆ ಅದಕ್ಕೆ ಯಾವುದೇ ಬೆಲೆಯಿಲ್ಲ. ಅದೇ ಮಾದರಿಯಲ್ಲಿ ಕಾಂಗ್ರೆಸ್​​ ಹಗಲು ಕನಸು ಕಾಣುವುದನ್ನು ಬಿಟ್ಟು, ಕೆಲಸ ಮಾಡಿ ಸಾರ್ವಜನಿಕರ ವಿಶ್ವಾಸ ಗಳಿಸಬೇಕು. ಪ್ರಧಾನಿ ಮೋದಿ ಅವರನ್ನು ಟೀಕಿಸುವುದು ಮತ್ತು ನಿಂದಿಸುವುದನ್ನು ನಿಲ್ಲಿಸಬೇಕು ಎಂದಿದ್ದಾರೆ. (ಏಜೆನ್ಸೀಸ್​)
ಡ್ರೈ ಐ ಸಿಂಡ್ರೋಮ ಸಮಸ್ಯೆಯಿಂದ ಬಳಲುತ್ತಿದ್ದೀರಾ : ನಿವಾರಣೆಗಾಗಿ ಇಲ್ಲಿದೆ ಮನೆಮದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 5 =
Remember me
