ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾಂಗ್ರೆಸ್‌ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ನರೇಂದ್ರ ಮೋದಿ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಸೂಪರ್ ಸ್ಟಾರ್​ ರಜನೀಕಾಂತ್!
ಪಕ್ಷದ ನಾಯಕರು ಹಾಗೂ ‘ಇಂಡಿಯಾ’ ಮೈತ್ರಿಕೂಟ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಎನ್​ಐ ವರದಿ ಮಾಡಿದೆ.
ಮೂಲಗಳ ಪ್ರಕಾರ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಖರ್ಗೆ ಅವರಿಗೆ ಶನಿವಾರ ರಾತ್ರಿ ಕರೆ ಮಾಡಿ ಆಹ್ವಾನ ನೀಡಿದ್ದಾರೆ ಎಂದು ವರದಿಯಾಗಿತ್ತು. ಅಲ್ಲಿಯವರೆಗೆ ಇಂಡಿಯಾ ಮೈತ್ರಿಕೂಟದ ಯಾವುದೇ ನಾಯಕರಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ಬಂದಿರಲಿಲ್ಲ.
ಆದರೆ, ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷ ಟಿಎಂಸಿ ಭಾಗವಹಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದರು.
ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇಂದು ಸಂಜೆ 7:15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ವಿದೇಶದ ಕೆಲವು ಅತಿಥಿಗಳ ಜೊತೆಗೆ ದೇಶದ ಹಲವು ಪ್ರಮುಖ ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಹಾಗೂ ಉದ್ಯಮಿಗಳು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಬಾಂಗ್ಲಾ ಸಂಸದ ಹತ್ಯೆ ಪ್ರಕರಣ: ಬಂಗಾಳದ ಕಾಲುವೆಯಲ್ಲಿ ಮಾನವ ಮೂಳೆಗಳು ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
