ಬೆಂಗಳೂರು:ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಎಐಸಿಸಿ ಕಚೇರಿಯಲ್ಲಿ ಮತದಾನ ಮಾಡಿದ್ದಾರೆ.
ಮತದಾನ ಮಾಡಿ, ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮ ಆಂತರಿಕ ಚುನಾವಣೆಯ ಒಂದು ಭಾಗವಾಗಿ ಈ ಚುನಾವಣೆ ನಡೆಯುತ್ತಿದೆ. ಪಕ್ಷದಲ್ಲಿ ನಾವು ಒಬ್ಬರಿಗೊಬ್ಬರು ಏನೇ ಹೇಳಿದರೂ, ಅದು ಸ್ನೇಹಪೂರ್ವಕವಾಗಿರುತ್ತದೆ. ನಮ್ಮೆಲ್ಲರ ಉದ್ದೇಶ ಒಂದೇ, ಅದು ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟುವುದು ಎಂದು ಹೇಳಿದರು.
ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿರುವ ಚುನಾವಣೆಯ ಹಿನ್ನೆಲೆಯಲ್ಲಿ ಶಶಿ ತರೂರ್ ನನಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ನಾನೂ ಕೂಡಾ ಅವರಿಗೆ ಶುಭ ಹಾರೈಸಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಮತದಾನ ಮಾಡಿದ್ದಾರೆ. ಇವರಿಗೆ ಡಿ.ಕೆ.ಸುರೇಶ್ ಸಾಥ್ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಈವರೆಗೆ 334 ಮಂದಿ ಮತದಾನ ಮಾಡಿದ್ದಾರೆ.
Karnataka | It is a part of our internal election. Whatever we said to each other is on a friendly note. Together we have to build the party. (Shashi) Tharoor telephoned me and wished me luck & I also said the same: Congress presidential candidate Mallikarjun Kharge in Bengalurupic.twitter.com/saMLUjXZXK— ANI (@ANI)October 17, 2022
Karnataka | It is a part of our internal election. Whatever we said to each other is on a friendly note. Together we have to build the party. (Shashi) Tharoor telephoned me and wished me luck & I also said the same: Congress presidential candidate Mallikarjun Kharge in Bengalurupic.twitter.com/saMLUjXZXK
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 4 =
Remember me
