ನವದೆಹಲಿ:ಮುಂಬರುವ ಲೋಕಸಭೆ ಚುನಾವಣೆಗೆ ರಾಜಸ್ಥಾನ ಮತ್ತು ತಮಿಳುನಾಡಿನ ಕ್ಷೇತ್ರಗಳಿಗೆ ಕಾಂಗ್ರೆಸ್ ಸೋಮವಾರ ತನ್ನ ಆರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ರಾಜಸ್ಥಾನದ ನಾಲ್ಕು ಮತ್ತು ತಮಿಳುನಾಡಿನ ಒಂದು ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಿದೆ.
ಇದನ್ನೂ ಓದಿ:ವಯನಾಡ್: ರಾಹುಲ್​ ಗಾಂಧಿ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್‌ ಸ್ಪರ್ಧೆ
ರಾಜಸ್ಥಾನದ ಅಜ್ಮೀರ್ ಲೋಕಸಭಾ ಕ್ಷೇತ್ರಕ್ಕೆ ರಾಮಚಂದ್ರ ಚೌಧರಿ, ರಾಜಸಮಂದ್‌ನಿಂದ ಸುದರ್ಶನ್ ರಾವತ್, ಬಿಲ್ವಾರ್​ ಕ್ಷೇತ್ರದಿಂದ ದಾಮೋದರ್ ಗುರ್ಜಾರ್​ರನ್ನು ಕಣಕ್ಕಿಳಿಸಿದೆ. ಕೋಟಾ ಕ್ಷೇತ್ರದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪ್ರಹ್ಲಾದ್ ಗುಂಜಾಲ್ ಅವರನ್ನು ಕಣಕ್ಕಿಳಿಸಿದೆ.
कांग्रेस अध्यक्ष श्री@khargeकी अध्यक्षता में आयोजित 'केंद्रीय चुनाव समिति' की बैठक में लोकसभा चुनाव, 2024 के लिए कांग्रेस उम्मीदवारों के नाम की छठवीं लिस्ट।pic.twitter.com/KoXyKzYH87
— Congress (@INCIndia)March 25, 2024

ತಮಿಳುನಾಡಿನ ತಿರುನಲ್ವೇಲಿ ಲೋಕಸಭಾ ಕ್ಷೇತ್ರಕ್ಕೆ ವಕೀಲ ರಾಬರ್ಟ್​ ಬ್ರೂಸ್​ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದರೊಂದಿಗೆ ಕಾಂಗ್ರೆಸ್​ ಇಲ್ಲಿವರೆಗೆ 190 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಆಪ್ತರಾಗಿದ್ದ ಗುಂಜಾಲ್ ಅವರು ಈ ಹಿಂದೆ ಎರಡು ಬಾರಿ ಕೋಟಾ ಉತ್ತರದಿಂದ ಶಾಸಕರಾಗಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.
ರಾಜಸ್ಥಾನ 25 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಂತ 1(ಏಪ್ರಿಲ್ 19) 12 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 13 ಸ್ಥಾನಗಳಿಗೆ ಎರಡನೇ ಹಂತದಲ್ಲಿ (ಏಪ್ರಿಲ್ 26) ಮತದಾನ ನಡೆಯಲಿದೆ. ತಮಿಳುನಾಡಿನ ಎಲ್ಲಾ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.
ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯ ಆಸೆ ತೋರಿಸಿ ಯುವತಿಗೆ 2.7 ಕೋಟಿ ರು. ಪಂಗನಾಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
