ಜೈಪುರ:ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಹಾಗೂ ಸಚಿನ್ ಪೈಲಟ್​ ಅವರ ಆಪ್ತರಿಗೂ ಕಾಂಗ್ರೆಸ್​ ಹೈಕಮಾಂಡ್​ ಮಣೆ ಹಾಕಿದೆ. ಶುಕ್ರವಾರ ಬಿಡುಗಡೆಯಾಗಿರುವ ಮೂರನೇ ಪಟ್ಟಿಯಲ್ಲಿ ಪಕ್ಷೇತರರು ಹಾಗೂ ಬಿಎಸ್​ಪಿ ಶಾಸಕರಿಗೆ ಟಿಕೆಟ್​ ಕೊಡಿಸುವಲ್ಲಿ ಅಶೋಕ್​ ಗೆಹ್ಲೋಟ್ ಯಶಸ್ವಿಯಾಗಿದ್ದಾರೆ.
राजस्थान विधानसभा चुनाव, 2023 के लिए भारतीय राष्ट्रीय कांग्रेस द्वारा जारी उम्मीदवारों की सूची-pic.twitter.com/ABxv5yLkhI
ಇದನ್ನೂ ಓದಿ:ಚಿಕ್ಕಬಳ್ಳಾಪುರ ಅಪಘಾತ; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಘೋಷಿಸಿದ ಸಿಎಂ
ಶುಕ್ರವಾರ ಬಿಡುಗಡೆಯಾದ 19 ಅಭ್ಯರ್ಥಿಗಳ ಪಟ್ಟಿಯಲ್ಲಿ 13 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದ್ದು, ಇತ್ತೀಚಿಗೆ ಬಿಜೆಪಿ ತೊರದು ಕಾಂಗ್ರೆಸ್​ ಸೇರಿದ ಬಿಜೆಪಿ ಶಾಸಕಿ ಶೋಭಾ ರಾಣಿ ಕುಶ್ವಾಗು ಧೋಲ್ಪುರದಿಂದ ಟಿಕೆಟ್​ ನೀಡಲಾಗಿದೆ. ಈಗಾಗಲೇ 95 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವ ಕಾಂಗ್ರೆಸ್​ ಉಳಿದ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವುದಾಗಿ ತಿಳಿಸಿದೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
