ಮುಂಬೈ:ಮಹಾರಾಷ್ಟ್ರ ಸರ್ಕಾರ ಎಲ್ಗಾರ್ ಪರಿಷದ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್​ಐಎ) ವಹಿಸಿರುವುದಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕ್ರಮ ಸರಿಯಿಲ್ಲ ಎಂದು ಭಾನುವಾರ ಹೇಳಿದ್ದಾರೆ.
‘ನಾವು ಪಾಲುದಾರ ಪಕ್ಷಗಳು. ಇಂಥ ವಿಷಯಗಳನ್ನು ಪರಸ್ಪರ ರ್ಚಚಿಸಬೇಕು. ಏಕಪಕ್ಷೀಯ ನಿರ್ಧಾರ ಸರಿಯಲ್ಲ. ಅಧಿಕಾರವನ್ನು ವಿವೇಕದಿಂದ ಬಳಸಬೇಕು’ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಮಹಾರಾಷ್ಟ್ರ ಉಸ್ತುವಾರಿಯಾಗಿರುವ ಖರ್ಗೆ ಅಭಿಪ್ರಾಯಪಟ್ಟರು. ಎಲ್ಗಾರ್ ಪರಿಷದ್ ಪ್ರಕರಣವನ್ನು ಎನ್​ಐಎಗೆ ವಹಿಸುವುದಕ್ಕೆ ರಾಜ್ಯ ಇಲಾಖೆ ಖಾತೆಯ ಅಭ್ಯಂತರವಿಲ್ಲ ಎಂದು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಗುರುವಾರ ಹೇಳಿದ್ದರು. ಇದನ್ನು ಶರದ್ ಪವಾರ್ ಕೂಡ ವಿರೋಧಿಸಿ ಠಾಕ್ರೆ ಕ್ರಮವನ್ನು ಟೀಕಿಸಿದ್ದಾರೆ. ಪ್ರಕರಣವನ್ನು ಎನ್​ಐಎಗೆ ವಹಿಸುವ ಹಠಾತ್ ನಿರ್ಧಾರ ಮೈತ್ರಿಕೂಟ ಸರ್ಕಾರದಲ್ಲಿ ಬಿರುಕಿಗೆ ಕಾರಣವಾಗಿದೆ.
ಏನಿದು ಎಲ್ಗಾರ್ ಪ್ರಕರಣ?
ಪುಣೆಯ ಶಾಂತಿವಾಡಾದಲ್ಲಿ 2017ರ ಡಿಸೆಂಬರ್ 31ರಂದು ನಡೆದ ಎಲ್ಗಾರ್ ಪರಿಷದ್​ನ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂಬುದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. 2018ರ ಜನವರಿ 1ರಂದು ಜಿಲ್ಲೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ನಡೆದ ಹಿಂಸಾಚಾರಕ್ಕೆ ಈ ಭಾಷಣ ಕಾರಣವಾಯಿತು. ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿತ್ತು ಎನ್ನುವುದು ಪೊಲೀಸರ ಆಪಾದನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + seventeen =
Remember me
